ಶ್ಲೋಕ – 13
ತ್ರಿಭಿರ್ಗುಣಮಯೈರ್ಭಾವೈರೇಭಿಃ ಸರ್ವಮಿದಂ ಜಗತ್ ।
ಮೋಹಿತಂ ನಾಭಿಜಾನಾತಿ ಮಾಮೇಭ್ಯಃ ಪರಮವ್ಯಯಮ್
ತ್ರಿಗುಣಾತ್ಮಕವಾದ ಈ ಸೋತ್ತುಗಳಿಂದ ಮೋಹಗೊಂಡ ಈ ಎಲ್ಲ ಜೀವಜಾತ ಇವುಗಳಿಂದಾಚೆಗಿರುವ, ಅಳಿವಿರದ ನನ್ನನ್ನು ತಿಳಿಯದಾಗಿದೆ.
ಇಡೀ ಜಗತ್ತು ತ್ರಿಗುಣಗಳಿಂದ ಮೋಹಿತವಾಗಿರುವುದರಿಂದ ಮತ್ತು ಈ ಮೂರು ಗುಣಗಳು ಎಲ್ಲಾ ಕಡೆ ತುಂಬಿರುವುದರಿಂದ ನಮಗೆ ತ್ರಿಗುಣಾತೀತವಾದ ಯೋಚನೆ ಅಸಾಧ್ಯ. ಈ ಕಾರಣದಿಂದ ತ್ರಿಗುಣಾತೀತನೂ ಅವ್ಯಯನೂ ಆದ ಆ ಭಗವಂತನನ್ನು ಪೂರ್ಣ ಗ್ರಹಿಸಲು ಜೀವನಿಗೆ ಸಾಧ್ಯವಿಲ್ಲ. ಭಗವಂತನನ್ನು ಅರಿಯಬೇಕಾದರೆ ನಾವು ಈ ತ್ರಿಗುಣದ ಚಕ್ರದಿಂದ ಹೊರಕ್ಕೆ ಬರಬೇಕು. ಆದರೆ ಹೊರ ಬರುವ ಮಾರ್ಗ ಎಂತು? ಉತ್ತರ ಮುಂದಿನ ಶ್ಲೋಕ.
