ತುಮಕೂರು: ದೇಶದ ಕ್ರೀಡಾ ಕ್ಷೇತ್ರದಲ್ಲಿ ಭಾರತ ಹೆಚ್ಚಿನ ಸಾಧನೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಕ್ರೀಡಾಪಟುಗಳ ಸಾಮರ್ಥ್ಯವನ್ನು ವೃದ್ಧಿ ಮಾಡಲು ಹಾಗೂ ಹೊಸ ಕ್ರೀಡಾಪಟುಗಳ ಅನ್ವೇಷಣೆಗಾಗಿ ದೇಶಾದ್ಯಂತ ಸಂಸತ್ ಕ್ರೀಡಾ ಮಹೋತ್ಸವ ಅಭಿಯಾನ ಆರಂಭಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ಲೋಕಸಭಾ ವ್ಯಾಪ್ತಿಯ ಸಂಸದ್ ಕ್ರೀಡಾ ಮಹೋತ್ಸವದ ಅಂಗವಾಗಿ ನಡೆದ ಕಬಡ್ಡಿ ಮತ್ತು ಖೋ ಖೋ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವೇ ವರ್ಷಗಳಲ್ಲಿ ಭಾರತದಲ್ಲಿಯೇ ಆಯೋಜನೆಗೊಳ್ಳಲಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಾದ ಕಾಮನ್ವೆಲ್ತ್ ಗೇಮ್ಸ್, ಒಲಿಂಪಿಕ್ಸ್ ಗೇಮ್ಸ್ ಗಳಲ್ಲಿ ಭಾರತ ಮತ್ತಷ್ಟು ಸಾಧನೆ ಮೆರೆಯುವ ದೃಷ್ಟಿಯಿಂದ ಪ್ರಧಾನಿ ಮೋದಿಯವರು ದೇಶದೆಲ್ಲೆಡೆ ಕ್ರೀಡಾ ಉತ್ತೇಜನ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದಾರೆ ಎಂದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ಎಚ್.ಎಸ್.ರವಿಶಂಕರ್ ಹೆಬ್ಬಾಕ, ವಿ ಡಾ.ಎಂ.ಆರ್.ಹುಲಿನಾಯ್ಕರ್, ಅಂಬಿಕಾ ಹುಲಿನಾಯ್ಕರ್, ವೈ.ಹೆಚ್.ಹುಚ್ಚಯ್ಯ, ಮುಖಂಡರಾದ ಎನ್.ಬಿ.ಪ್ರದೀಪ್ಕುಮಾರ್, ಮೊದಲಾದವರು ಭಾಗವಹಿಸಿದ್ದರು.
ವರದಿ : ಕೆ ಬಿ ಚಂದ್ರಚೂಡ್
