ಹಾಸನ: ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮ್ಮದ್ ಸುಜೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರ ಹೊರಡಿಸಿದ ವರ್ಗಾವಣೆ ಆದೇಶದಂತೆ, ಹಾಸನ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶುಭನ್ವಿತಾ ಅವರನ್ನು ನೇಮಕ ಮಾಡಲಾಗಿದೆ.

ಮೊಹಮ್ಮದ್ ಸುಜೀತಾ ಅವರು ಸೇವೆ ಸಲ್ಲಿಸಿದ ಅವಧಿಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ನೂತನವಾಗಿ ಅಧಿಕಾರ ಸ್ವೀಕರಿಸಲಿರುವ ಶುಭನ್ವಿತಾ ಅವರು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣಕ್ಕೆ ಆದ್ಯತೆ ನೀಡಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಹೊಸ ಎಸ್ಪಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಚುರುಕು ಬರಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.




