ತುಮಕೂರು: ರಾಜ್ಯ ಸರ್ಕಾರ ಬೀದಿಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಇಂತಹ ಸಣ್ಣ ವ್ಯಾಪಾರಿಗಳ ವ್ಯಾಪಾರವಹಿವಾಟಿಗೆ ಆರ್ಥಿಕ ಸಾಲ ಸೌಲಭ್ಯ ನೀಡಬೇಕು. ಬೀದಿ ವ್ಯಾಪಾರಿಗಳ ಬದುಕಿನ ಭದ್ರತೆಗೆ ವಿವಿಧ ಯೋಜನೆಗಳನ್ನು ರೂಪಿಸಿ ನೆರವಾಗಬೇಕು ಎಂದು ಸ್ಫೂರ್ತಿ ಡೆವಲಪರ್ಸ್ನ ಮಾಲೀಕ, ಬಿಜೆಪಿ ಮುಖಂಡ ಎಸ್.ಪಿ.ಚಿದಾನಂದ್ ಒತ್ತಾಯಿಸಿದರು.
ನಗರದ ಕೆ.ಆರ್.ಬಡಾವಣೆಯ ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘದ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ಗೆ ನಮನ ಹಾಗೂ ಸಂಘದ ರಾಜ್ಯಾಧ್ಯಕ್ಷ, ಕನ್ನಡಪರ ಹಾಗೂ ಇತರೆ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಗೋಪಿಯವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸವಲತ್ತು ವಿತರಿಸಿ ಮಾತನಾಡಿದರು.
ಸಂಘಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವವರು ಸಾರ್ವಜನಿಕರ ಹಿತಕಾಯುವ ಕಾರ್ಯದಲ್ಲಿ ಹೆಚ್ಚು ಕಾಳಜಿ ವಹಿಸಬೇಕು. ಅವರ ಧ್ವನಿಯಾಗಿ ನಿಲ್ಲಬೇಕು. ಶ್ರಮಜೀವಿ ಬೀದಿ ವ್ಯಾಪಾರಿಗಳ ಸಂಘದ ಆಧ್ಯಕ್ಷರಾಗಿರುವ ಎಂ.ಗೋಪಿಯವರು, ಕಷ್ಟಜೀವಿ ವ್ಯಾಪಾರಿಗಳಿಗೆ ಶಕ್ತಿಯಾಗಿ ಬೆಂಬಲಕ್ಕಿದ್ದಾರೆ. ಅವರ ಕಷ್ಟಸುಖಗಳಿಗೆ ಸ್ಪಂದಿಸಿ ನೆರವಾಗುತ್ತಿರುವುದು ಶ್ಲಾಘನೀಯ ಎಂದರು.
ಇದನ್ನು ಓದಿ: ತುಮಕೂರು : ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜ.10 ಮತ್ತು 11ರಂದು 33ನೇ ವಾರ್ಷಿಕೋತ್ಸವ.!
ಸಂಘದ ರಾಜ್ಯಾಧ್ಯಕ್ಷ ಎಂ.ಗೋಪಿ ಮಾತನಾಡಿ, ಸಂಘದ ಸದಸ್ಯರನ್ನು ಕುಟುಂಬದ ಸದಸ್ಯರಂತೇ ಭಾವಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ ಎಲ್ಲಾರೀತಿಯಲ್ಲೂ ನೆರವಾಗುತ್ತಾ ಬಂದಿದ್ದೇನೆ. ಇದೇ ಭಾವನೆಯಿಂದ ಸಂಘದ ಸದಸ್ಯರೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ, ಎಲ್ಲರೂ ಸಂಘಟಿತರಾಗಿ ಸಂಘವನ್ನು ಸದೃಢವಾಗಿ ಬೆಳೆಸಿದರೆ ಪರಸ್ಪರ ಸಹಕಾರದಿಂದ ಎಲ್ಲರೂ ಬೆಳೆಯಲು ಸಾದ್ಯವಾಗುತ್ತದೆ ಎಂದು ಹೇಳಿದರು.
ಸಮಾಜ ಸೇವಕ ನಟರಾಜಶೆಟ್ಟಿ, ಪಿ.ಎನ್.ರಾಮಯ್ಯ ಸಂಘದ ರಾಜ್ಯ ಗೌರವ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷರಾದ ಶಬ್ಬೀರ್ ಅಹ್ಮದ್, ಆದಿಲ್ ಪಾಷಾ, ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಜಿ.ರಮ್ಯಾಶ್ರೀ, ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜು, ಮುಖಂಡರಾದ ಸಿದ್ಧು ಗೋಬಿ, ಕೃಷ್ಣ, ಸವಿತಾ, ಅನಿತಾ, ಭವ್ಯ, ಆನಂದ್ ಮೊದಲಾದವರು ಭಾಗವಹಿಸಿದ್ದರು.
ಈ ವೇಳೆ ಮಹಿಳೆಯರಿಗೆ ಸೀರೆ, ಪುರುಷರಿಗೆ ಷರ್ಟ್, ಪ್ಯಾಂಟ್ ವಿತರಿಸಲಾಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
– ಕೆ.ಬಿ.ಚಂದ್ರಚೂಡ
