ಚನ್ನರಾಯಪಟ್ಟಣ : ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ನೆನೆಗುದುಗೆ ಬಿದ್ದಿದ್ದ ದಿಡಗ ಏತನೀರಾವರಿ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ 74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಲ್ಲದೆ, ವಿವಿಧ ಏತನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ನೀಡುವ ಮೂಲಕ ರೈತರ ಬಾಳಿಗೆ ಬೆಳಕಾಗಿದೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿ ದಿಂಡಗೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಹಿರೀಸಾವೆ-ಜುಟ್ಟನಹಳ್ಳಿ, ನುಗ್ಗೇಹಳ್ಳಿ, ಸಂತೆಶಿವರ, ನವಿಲೆ. ಆಲಗೊಂಡನಹಳ್ಳಿ, ಕಾಚೇನಹಳ್ಳಿ, ಕಲ್ಲೆಸೋಮನಹಳ್ಳಿ, ತೋಟಿ, ಕಬ್ಬಳಿ ಸೇರಿದಂತೆ ತಾಲೂಕಿನ ಗಡಿಭಾಗಕ್ಕೂ ಹೇಮಾವತಿ ನದಿ ನೀರನ್ನು ಏತನೀರಾವರಿ ಮೂಲಕ ಹರಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ದಿಡಗ ಮತ್ತು ನುಗ್ಗೇಹಳ್ಳಿ ವ್ಯಾಪ್ತಿಯ ರೈತರ ನಿಯೋಗದೊಂದಿಗೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಿದ್ದರಿಂದ ನೀರಾವರಿ ಯೋಜನೆಗೆ ಸ್ಪಂದಿಸಿದ ಸರ್ಕಾರ ಹಣವನ್ನು ಬಿಡುಗಡೆ ಮಾಡಿತು. ಕಳೆದ ತಿಂಗಳು ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿಡಗ ಏತನೀರಾವರಿಗೆ ಸಿಎಂ ಚಾಲನೆ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಇದನ್ನು ಓದಿ: ಚನ್ನರಾಯಪಟ್ಟಣ : ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಮೌಲ್ಯವನ್ನು ಎತ್ತಿ ಹಿಡಿಯಬೇಕು- ಶಾಸಕ ಸಿಎನ್ ಬಾಲಕೃಷ್ಣ
ಯಾವುದೇ ಯೋಜನೆ ಜಾರಿಯಾಗಿ ಅದು ಪೂರ್ಣವಾದಗ ಕ್ಷೇತ್ರದ ಜನಪ್ರತಿನಿಧಿ ನಾನು ಮಾಡಿಸಿದ್ದು ಎನ್ನುತ್ತಾರೆ, ಯೋಜನೆ ಅರ್ಧಕ್ಕೆ ನಿಂತರೆ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುವುದನ್ನು ರೂಡಿಸಿಕೊಂಡಿದ್ದಾರೆ, ನಾನು ನೀರಾವರಿ ಇಲಾಖೆ ಸಂಸದೀಯ ಕಾರ್ಯದರ್ಶಿಯಾಗಿದ್ದಾಗ ಅಂದಿನ ನೀರಾವರಿ ಮಂತ್ರಿ ಡಿ.ಕೆ.ಶಿವಕುಮಾರ್ ಮೂಲಕ ತಾಲೂಕಿನ ಎಲ್ಲಾ ಏತನೀವಾರಿ ಯೋಜನೆಗಳಿಗೆ ಅನುದಾನ ಕೊಡಿಸಿದ್ದರ ಫಲವಾಗಿ ಯೋಜನೆಗಳು ಪೂರ್ಣಗೊಂಡಿವೆ ಎಂದರು.
ಕಾಂಗ್ರೇಸ್ ಯುವ ಮುಖಂಡ ಆನಂದ್ಗೌಡ ಮಾತನಾಡಿ, ಮಾತನಾಡಿ ಗ್ಯಾರಂಟಿ ಅನುಷ್ಠಾನದಿಂದ ಪ್ರತಿಯೊಂದೂ ಸಮುದಾಯ ವರ್ಗದವರಿಗೆ ಹೆಚ್ಚಿನ ಅನುಕೂಲವಾಗಿದೆ, ಹಾಗಾಗಿ ಅದರ ಉಪಯೋಗ ಪಡೆದು ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷದ ಬಲವರ್ಧನೆಗೆ ಮುಂದಾಗುವಂತೆ ನೆರೆದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಮಂಜೇಗೌಡ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಅಣತಿ ಆನಂದ್ ದಿಂಡಗೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶಿವನಂಜೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ರವಿ, ಕಲಸಿಂದ ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕರಾದ ಶಿವರಾಜು, ಮೋಹನ್, ಯುವಮುಖಂಡ ಅನಂದ್ಗೌಡ, ಪ್ರಮುಖರಾದ ಜಗದೀಶ್, ಅಶೋಕ್, ತಮ್ಮಯ್ಯ ಮೊದಲಾದವರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.

[…] […]