Bhagavad Gita
ಶ್ಲೋಕ – 15
ಮಾಮುಪೇತ್ಯ ಪುನರ್ಜನ್ಮ ದುಃಖಾಲಯಮಶಾಶ್ವತಮ್ ।
ನಾSಪ್ನುವಂತಿ ಮಹಾತ್ಮಾನಃ ಸಂಸಿದ್ಧಿಂ ಪರಮಾಂ ಗತಾಃ ॥೧೫॥
ಮಾಮ್ ಉಪೇತ್ಯ ಪುನಃ ಜನ್ಮ ದುಃಖ ಆಲಯಮ್ ಅಶಾಶ್ವತಮ್ ।
ನ ಅಪ್ನುವಂತಿ ಮಹಾ ಆತ್ಮಾನಃ ಸಂಸಿದ್ಧಿಮ್ ಪರಮಾಮ್ ಗತಾಃ –ಹಿರಿಯ ಸಿದ್ಧಿಯನ್ನು ಪಡೆದ ಇಂಥ ಜೀವಗಳು ನನ್ನನ್ನು ಪಡೆದ ಮೇಲೆ ದುಗುಡಗಳ ನೆಲೆಯಾದ ನಾಲ್ಕು ದಿನದ ಈ ಸಂಸಾರದಲ್ಲಿ ಮರಳಿ ಹುಟ್ಟಿ ಬರುವುದಿಲ್ಲ.
ಸಾಧನೆಯ ಮೂಲಕ ಸಿದ್ಧಿಯನ್ನು ಪಡೆದು ಭಗವಂತನನ್ನು ಸೇರಿದ ಜೀವರು ಎಂದೂ ದುಃಖಮಾಯವಾದ ಮತ್ತು ಅಶಾಶ್ವತವಾದ ಈ ಸಂಸಾರದಲ್ಲಿ ಮರಳಿ ಹುಟ್ಟುವುದಿಲ್ಲ. “ನನ್ನನ್ನು ಬಂದು ಸೇರುವವರು ಪುಣ್ಯಾತ್ಮರು. ಜಗತ್ತಿನಲ್ಲಿ, ಜೀವನದ ಸಾಧನೆಯಲ್ಲಿ ಅತ್ಯಂತ ಶ್ರೇಷ್ಠವಾದ ಸಿದ್ಧಿ ಎಂದರೆ ಭಗವಂತನ ಸಾಕ್ಷಾತ್ಕಾರ. ಅದನ್ನು ಪಡೆದವರು ಮತ್ತೆ ಸಂಸಾರದ ಬಂಧದಲ್ಲಿ ಸಿಲುಕಿ ಒದ್ದಾಡುವ ಅಗತ್ಯವಿಲ್ಲ” ಎನ್ನುತ್ತಾನೆ ಕೃಷ್ಣ .
