ಶ್ಲೋಕ – 18
ಅವ್ಯಕ್ತಾದ್ ವ್ಯಕ್ತಯಃ ಸರ್ವಾಃ ಪ್ರಭವಂತ್ಯಹರಾಗಮೇ ।
ರಾತ್ರ್ಯಾಗಮೇ ಪ್ರಲೀಯಂತೇ ತತ್ರೈವಾವ್ಯಕ್ತಸಂಜ್ಞಕೇ ॥೧೮॥
ಉಚ್ಚಾರಣೆ– ಅವ್ಯಕ್ತಾತ್ ವ್ಯಕ್ತಯಃ ಸರ್ವಾಃ ಪ್ರಭವಂತಿ ಅಹಃ ಆಗಮೇ ।
ರಾತ್ರಿ ಆಗಮೇ ಪ್ರಲೀಯಂತೇ ತತ್ರ ಏವ ಅವ್ಯಕ್ತ ಸಂಜ್ಞಕೇ
–ಕಾಣದ ಭಗವಂತನಿಂದ ಕಾಣುವ ಈಯೆಲ್ಲ ಹಗಲಾದಾಗ ರೂಪುಗೊಳ್ಳುತ್ತವೆ,
ಇರುಳಾದಾಗ ಅದೇ ಕಾಣದ ಭಗವಂತನಲ್ಲಿ ಕಣ್ಮರೆಯಾಗುತ್ತವೆ.
ಮಹಾಪ್ರಳಯ ಕಾಲದಲ್ಲಿ ಅವ್ಯಕ್ತನಾದ ಭಗವಂತನಲ್ಲಿ ವ್ಯಕ್ತವಾಗಿರುವ ಈ ಪ್ರಪಂಚ ಪರಮಾಣುವಿನ ರೂಪದಲ್ಲಿ ಸೇರಿಕೊಳ್ಳುತ್ತದೆ.
ಪುನಃ ಸೃಷ್ಟಿ ಕಾಲದಲ್ಲಿ ಮರಳಿ ಸೂಕ್ಷ್ಮ ರೂಪದಿಂದ ಸ್ಥೂಲ ರೂಪವನ್ನು ಪಡೆದು ವ್ಯಕ್ತವಾಗುತ್ತವೆ.
ಹಿಂದಿನ ಶ್ಲೋಕ: ಭಗವದ್ಗೀತೆ ಅಧ್ಯಾಯ-8, ಶ್ಲೋಕ -17
