ಹಾಸನ: ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ದಿನಾಂಕ 14.01.2026 ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಸನದ ಕೆಎಸ್ಆರ್ಟಿಸಿ (K.S.R.T.C) ಆಡಳಿತ ತರಬೇತಿ ಕೇಂದ್ರದಲ್ಲಿ ಆರೋಗ್ಯ ಜಾಗೃತಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಚೇತನ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಆರೋಗ್ಯಕ್ಕಾಗಿ ಯೋಗ, ಮನೆಮದ್ದುಗಳ ಬಳಕೆ, ಔಷಧಿ ರಹಿತ ಜೀವನ ನಡೆಸುವ ವಿಧಾನ, ಹಾಗೂ ದೀರ್ಘಾಯುಷಿಯಾಗಿ ಆರೋಗ್ಯಕರ ಜೀವನ ಹೇಗೆ ನಡೆಸಬೇಕು ಎಂಬ ಮಹತ್ವದ ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮಕ್ಕೆ ಅಧ್ಯಕ್ಷರಾದ ರೋ. ಎಚ್.ಡಿ. ವಜ್ರಕುಮಾರ್ ಅವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಉಪನ್ಯಾಸದಲ್ಲಿ ಚೇತನ್ ಗುರೂಜಿ ಅವರು ಯೋಗಾಸನಗಳು ಹಾಗೂ ಪ್ರಾಣಾಯಾಮವನ್ನು ಪ್ರಾಯೋಗಿಕವಾಗಿ ತಿಳಿಸಿ, ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಈ ಶಿಬಿರದಲ್ಲಿ ಸುಮಾರು 80ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಪಡೆದರು.
ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ರೋ. ಎಚ್.ಡಿ. ವಜ್ರಕುಮಾರ್, ಕಾರ್ಯದರ್ಶಿ ರೋ. ಕೆ.ಎಸ್. ಯೋಗೇಶ್, ಹಿರಿಯ ಸದಸ್ಯರಾದ ರೋ. ಎಂ.ಸಿ. ರಾಜು, ರೋ. ಕರುಣೇಶ್ ಸೇರಿದಂತೆ ಕ್ಲಬ್ನ ಇತರ ಸದಸ್ಯರು ಉಪಸ್ಥಿತರಿದ್ದರು.
ಈ ಯಶಸ್ವಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ತಂಡವು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದೆ.
