ಶ್ಲೋಕ – 20
ಪರಸ್ತಸ್ಮಾತ್ತು ಭಾವೋSನ್ಯೋSವ್ಯಕ್ತೋ ವ್ಯಕ್ತಾತ್ ಸನಾತನಃ ।
ಯಃ ಸ ಸರ್ವೇಷು ಭೂತೇಷು ನಶ್ಯತ್ಸು ನ ವಿನಶ್ಯತಿ
ಈ ಕಾಣುವ ವಿಶ್ವಕ್ಕಿಂತ ಬೇರೆಯಾಗಿ, ಮಿಗಿಲಾಗಿ ಎಂದೆಂದು ಇರುವ ತತ್ವವೆ ಅವ್ಯಕ್ತ. ಎಲ್ಲ ಭೂತಗಳು ಇಲ್ಲವಾದಾಗಲೂ ಅದು ಇರುತ್ತದೆ.
ಎಲ್ಲವನ್ನೂ ಮೀರಿ ನಿಂತ ಭಗವಂತ ಎಲ್ಲಕ್ಕಿಂತ ವಿಲಕ್ಷಣ ಮತ್ತು ಶ್ರೇಷ್ಠ. ಆತ ಸನಾತನ. ಎಲ್ಲಾ ಕಾಲದಲ್ಲೂ ನಿರ್ವೀಕಾರನಾಗಿರುವ, ಸರ್ವವೇದ ಪ್ರತಿಪಾಧ್ಯ, ಸಮಸ್ತ ಚರಾಚರಾತ್ಮಕ ಪ್ರಪಂಚ ನಾಶವಾದಾಗಲೂ ನಾಶವಾಗದೆ ಎಲ್ಲವನ್ನೂ ತನ್ನಲ್ಲಿ ಲೀನವಾಗಿಸಿಕೊಂಡು ಇರುವ ಏಕಮಾತ್ರ ತತ್ವ ಭಗವಂತ.
ಹಿಂದಿನ ಶ್ಲೋಕ: ಭಗವದ್ಗೀತೆ ಅಧ್ಯಾಯ-8, ಶ್ಲೋಕ -19
