ಕೆ.ಆರ್.ಪೇಟೆ- ಬೂಕನಕೆರೆ ಹೋಬಳಿಯ ನಾರ್ಗೋನಹಳ್ಳಿ ಗ್ರಾಮದಲ್ಲಿ ಎನ್.ಎ.ಸಿ.ಸಿ ಕಪ್ ಎನ್.ಪಿ. ಎಲ್ -0.1 ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾಪಟುಗಳಿಗೆ ಸಲಹೆ ನೀಡಿ ಮಾತನಾಡಿದವರು.ಯುವಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದುಶ್ಚಟಗಳಿಂದ ದೂರವಿರಲು ಸಾಧ್ಯ ಬಾಲ್ಯದಿಂದಲೇ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು.
ನಾರ್ಗೋನಹಳ್ಳಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸಂಘಟನೆ ಗಟ್ಟಿಗೊಳಿಸುವ ಹಾಗೂ ಯುವಶಕ್ತಿಯನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕ್ರೀಡಾಕೂಟಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುತ್ತಿದೆ. ಯುವಜನರು ಆರೋಗ್ಯವನ್ನು ಸುಸ್ಥಿರವಾಗಿ ಇಟ್ಟುಕೊಳ್ಳಲು ನಿರಂತರವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಶ್ಯಾಂಪ್ರಸಾದ್,ನಾರ್ಗೋನಹಳ್ಳಿ ಗ್ರಾಮದಲ್ಲಿ ಎನ್.ಎ.ಸಿ.ಸಿ ಕಪ್ ಎನ್.ಪಿ. ಎಲ್ – 01 ಕ್ರಿಕೆಟ್ ಆಯೋಜಕರು, ಕ್ರಿಕೆಟ್ ಕ್ರೀಡಾ ಅಭಿಮಾನಿಗಳು ಸೇರಿದಂತೆ ಉಪಸ್ಥಿತರಿದ್ದರು.
– ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
