ಹಾಸನ: ನಗರದ ಕೆಎಎಸ್ಆರ್ಟಿಸಿ ಲೇಔಟ್ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಇಂದು ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು,ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವಿದ್ಯಾರ್ಥಿ ನಿಲಯದಿಂದ ಹಾಸ್ಟೆಲ್ ಸಮಸ್ಯೆಯಿಂದ ಬಳಲುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಬಹುಮಾನ್ಯ ಅನುಕೂಲವಾಗಲಿದೆ. ನೂತನ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿನಿಯರ ವಸತಿ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ವಿದ್ಯಾರ್ಥಿನಿಯರ ಬಳಕೆಗೆ ಆದಷ್ಟು ಬೇಗ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
