ತುಮಕೂರು: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ವಾರ್ತಾ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಆರ್.ರೂಪಕಲಾ ಅವರಿಗೆ ಬುಧವಾರ ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ರೂಪಕಲಾ ಅವರು ಬೀದರ್,ಬಳ್ಳಾರಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಇಲಾಖೆಯಲ್ಲಿ 26 ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.ಇಲಾಖೆ ಮತ್ತು ಪತ್ರಕರ್ತರ ಮಧ್ಯೆ ಕೊಂಡಿಯಾಗಿ ಅತ್ಯಂತ ಯಶಸ್ವಿಯಾಗಿ.ಶಿಸ್ತುಬದ್ಧವಾಗಿ ಕೆಲಸ ನಿರ್ವಹಿಸುತ್ತಿರುವ ಇವರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯ ಮಾಡಿದ್ದಾರೆ.ಮಾಧ್ಯಮ ಪ್ರತಿನಿಧಿಗಳು, ಚುನಾವಣೆ ವಿಶ್ಲೇಷಕರು ಹಾಗು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯಲ್ಲಿ 1952 ರಿಂದ ಈವರೆಗೆ ನಡೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆಗಳ ಫಲಿತಾಂಶ ಕುರಿತು ಕೈಪಿಡಿ ತಯಾರಿಸುವ ಹೊಸ ಪ್ರಯತ್ನ ಮಾಡಿದ್ದಾರೆ ಇಂತಹ ಹಲವಾರು ಸೃಜನಶೀಲ ಸೇವೆಗಳನ್ನು ಗಮನಿಸಿ ಜಿಲ್ಲಾಡಳಿತ ಪ್ರಶಸ್ತಿಗೆ ಇವರನ್ನು ಪಾತ್ರವಾಗಿಸಿದೆ.
ಪ್ರಶಸ್ತಿಗೆ ಭಾಜನರಾದ ರೂಪಕಲಾ ಅವರನ್ನು ಜಿಲ್ಲಾ ವಾರ್ತಾ ಇಲಾಖೆಯ ಹಿರಿಯ ಉಪನಿರ್ದೇಶಕರಾದ ಜಿ.ಹಿಮಂತರಾಜು ಹಾಗೂ ಕಚೇರಿ ವರ್ಗದವರು,ಪತ್ರಕರ್ತರು ಅಭಿನಂದಿಸಿದ್ದಾರೆ.
– ಕೆ.ಬಿ.ಚಂದ್ರಚೂಡ
