Bhagavad Gita
ಶ್ಲೋಕ – 08
ಪ್ರಕೃತಿಂ ಸ್ವಾಮವಷ್ಟಭ್ಯ ವಿಸೃಜಾಮಿ ಪುನಃ ಪುನಃ ।
ಭೂತಗ್ರಾಮಮಿಮಂ ಕೃತ್ಸ್ನಮವಶಂ ಪ್ರಕೃತೇರ್ವಶಾತ್ ॥೮॥
ಪ್ರಕೃತಿಯ ನಿಯತಿಗೊಳಪಟ್ಟು ಪರತಂತ್ರವಾದ [ನನ್ನಂಕೆಯಲ್ಲಿರುವ]
ಈ ಇಡಿಯ ವಿಶ್ವವನ್ನು ನನ್ನದೆ ಆದ ಪ್ರಕೃತಿಯನ್ನು ಬಳಸಿ ಮತ್ತೆ ಮತ್ತೆ ನಿರ್ಮಿಸುತ್ತೇನೆ.
ಪ್ರಳಯ ಕಾಲದಲ್ಲಿ ಸೂಕ್ಷ್ಮರೂಪದಲ್ಲಿ ಭಗವಂತನನ್ನು ಸೇರಿದ ಜಡ ಮತ್ತು ಜೀವವನ್ನು ಭಗವಂತ ತನ್ನ ಅಧೀನವಾದ ಪ್ರಕೃತಿಯನ್ನು ಬಳಸಿ ಮತ್ತೆ ಸೃಷ್ಟಿ ಮಾಡುತ್ತಾನೆ. ಭಗವಂತನ ಈ ಸೃಷ್ಟಿ ಮತ್ತು ಸಂಹಾರಚಕ್ರ ನಿರಂತರ. ಇಂತಹ ಅನಂತ ಬ್ರಹ್ಮಾಂಡಗಳು ಹಿಂದೆ ನಿರ್ಮಾಣವಾಗಿ ಸಂಹಾರವಾಗಿವೆ ಮತ್ತು ಇನ್ನೂ ಅನಂತ ಕಾಲದಲ್ಲೂ ಇದು ಮುಂದುವರಿಯುತ್ತದೆ. ಈ ಕಾರಣಕ್ಕಾಗಿ ಭಗವಂತನನ್ನು ಅನಂತ ಕೋಟಿ ಬ್ರಹ್ಮಾಂಡನಾಯಕ ಎಂದು ಕರೆಯುತ್ತಾರೆ.(ಈ ಬಗ್ಗೆ ವಿವರವಾಗಿ ನಾವು ಏಳನೇ ಅಧ್ಯಾಯದಲ್ಲೇ ಚರ್ಚಿಸಿದ್ದೇವೆ).
