ಕೊರಟಗೆರೆ:- ತಾಲ್ಲೂಕಿನ ಶ್ರೀ ಮಡಿವಾಳ ಮಾಚಿದೇವ ಜಯಂತೋತ್ಸವ ವನ್ನು ಗ್ರೇಡ್ 2 ತಹಶೀಲ್ದಾರ್ ರಾಮಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಕಚೇರಿಯ ಕಾರ್ಯಾಲಯದ ಸಭಾಂಗಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
12ನೇ ಶತಮಾನದಲ್ಲಿ ಬಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ ‘ದೇವರ ಹಿಪ್ಪರಗಿಯಲ್ಲಿ’ ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು ಜನಿಸಿದ್ದು.ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.

ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ‘ ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು.
‘ಕಲ್ಯಾಣ ಕ್ರಾಂತಿ’ಯ ಸಂದರ್ಭದಲ್ಲಿ ಮಾಚಿದೆವರು ಹೊತ್ತ ‘ಜವಾಬ್ಧಾರಿ’ ಗುರುತರವಾದುದು. ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವ ಜವಾಬ್ಧಾರಿ ಹೊತ್ತು, ಚನ್ನ ಬಸವಣ್ಣ, ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ್ಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ ‘ಭೀಮ ರಕ್ಷೆಯಾಗಿ’ ನಿಂತರು. ತಮ್ಮ ಧೈರ್ಯ, ಅನುಪಮ ಬಲದಿಂದ ಶರಣರನ್ನು, ವಚನ ಸಾಹಿತ್ಯವನ್ನು ರಕ್ಷಿಸಿ ಉಳಿವಿಗೆ ತಲುಪಿಸಿದ ಸಾಹಸಿ ಮಡಿವಾಳ ಮಾಚಯ್ಯ.
ಸಮಸ್ತ ಶರಣರು ಉಳಿವೆಯಲ್ಲಿ ಲಿಂಗೈಕ್ಯರಾಗಲು ತಮ್ಮ ಮಹಾನ್ ಕರ್ತವ್ಯ ಪೂರೈಸಿ ಸಿಂದಗಿ ತಾಲ್ಲೂಕಿನ ಕಲಿಪುರ (ಇಗಿನ ಕಲಕೇರಿ)ತನ್ನ ಗುರುವಾದ ವೀರಘಂಟೈರ ಜೊತೆಗೆ ಜೀವಂತ ಸಮಾದಿಯಾಗಿ ಗುರು ಶಿಷ್ಯರು ಐಕ್ಯರಾದರು.
ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ್ ರಾಮಪ್ರಸಾದ್, R I ಬಸವರಾಜು ಹಾಗೂ ಆಡಳಿತದ ಅಧಿಕಾರಿಗಳು ಮತ್ತು ಶ್ರೀ ಮಡಿವಾಳ ಮಾಚಿದೇವ ಸಂಘದ ರುದ್ರೇಶ್ ಅಧ್ಯಕ್ಷರು, ಹನುಮಂತಪ್ಪ ಉಪಾಧ್ಯಕ್ಷರು, ಆನಂದ್ ಕಾರ್ಯದರ್ಶಿ, ರಾಘವೇಂದ್ರ, ಶರತ್, ಮತ್ತು ಸಮುದಾಯದ ಮುಖಂಡರು ಬಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ : ನರಸಿಂಹಯ್ಯ ಹೊಸಕೋಟೆ
