ಕೆ.ಆರ್.ಪೇಟೆ : ತಾಲ್ಲೂಕಿನ ಹೊಸಹೊಳಲು ಗ್ರಾಮದ ಮುಖಂಡ ವಿಜಯ ಕುಮಾರ್ ಅವರ ಧರ್ಮಪತ್ನಿ ಭಾರತಿ ವಿಜಯಕುಮಾರ್ ಅನಾರೋಗ್ಯದಿಂದ ಕೆಲ ದಿನಗಳಿಂದ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಹಠಾತ್ ಹೃದಯಾಘಾತದಿಂದ ಮದ್ಯಾಹ್ನ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಮೃತರ ಪತಿ ಕೆ.ಆರ್.ಪೇಟೆ ಪಟ್ಟಣದಲ್ಲಿರುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರವರ ಕಚೇರಿಯಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭಾರತಿ ವಿಜಯಕುಮಾರ್, ಓರ್ವ ಗಂಡು, ಓರ್ವೆ ಹೆಣ್ಣುಮಗಳು, ಮೊಮ್ಮಕ್ಕಳು ಸೇರಿದಂತೆ ಅಪಾರ ತುಂಬಿದ ಬಳಗವನ್ನು ಬಿಟ್ಟು ಅಗಲಿದ್ದಾರೆ,ಮೃತರ ಅಂತ್ಯ ಸಂಸ್ಕಾರವು ಬುಧವಾರ (ನಾಳೆ) ಬೆಳಿಗ್ಗೆ 11. ಗಂಟೆಗೆ ಸ್ವಗ್ರಾಮದಲ್ಲಿರುವ (ಹೊಸಹೊಳಲು) ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ಶಾಸಕ ಹೆಚ್.ಟಿ ಮಂಜು,ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ ಚಂದ್ರಶೇಖರ್, ಬಿ ಪ್ರಕಾಶ್ ,ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕರಾದ ಡಾಲು ರವಿ, ಎಂ ಬಿ ಹರೀಶ್,ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಎಂ. ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಷ್,ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್ ದೇವರಾಜು,ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭಾಕರ್,ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಿ.ಎಂ ಕಿರಣ್,ಜೆಡಿಎಸ್ ಅಧ್ಯಕ್ಷ ಜಾನಕೀರಾಂ,ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಎಸ್.ಎಲ್ ಮೋಹನ್,ಎಂ.ಡಿ.ಸಿ.ಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಅಶೋಕ್,ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಹೊಸಹೊಳಲು ಗ್ರಾಮಸ್ಥರು, ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗ,ವಿವಿಧ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಹಿತಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
