ಬೇಲೂರು: ತಾಲೂಕಿನ ಬಿಕ್ಕೋಡು ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಡಾ.ನಾರಾಯಣಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಆಟೋ ಚಾಲಕರು ಮತ್ತು ಮಾಲಿಕರಿಗೆ, ಹಾಗೂ ಸಾರ್ವಜನಿಕರಿಗಾಗಿ ಆಯೋಜನೆ ಮಾಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆಟೋ ಚಾಲಕರು ಗ್ರಾಮೀಣ ಜನತೆ ತಮ್ಮ ಹಾಗೂ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆ ಎದುರಾದರೆ ನಿರ್ಲಕ್ಷ್ಯ ತೋರದೆ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ಆಟೋ ಚಾಲಕರು ತಮ್ಮ ಒತ್ತಡದ ಕೆಲಸದಿಂದ ಸರಿಯಾದ ನಿದ್ದೆ ಮಾಡಲು ಸಾಧ್ಯವಿಲ್ಲ, ಸರಿಯಾದ ಸಮಯಕ್ಕೆ ಆಹಾರ ಸೇವಿಸಲು ಸಾಧ್ಯವಾಗುವುದಿಲ್ಲ, ಇದರಿಂದ ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆಗಳು ಸೃಷ್ಟಿಯಾಗುತ್ತವೆ. ಆದ್ದರಿಂದ ಆಟೋ ಚಾಲಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಉತ್ತಮ ಆಹಾರ ಸೇವನೆ ಮತ್ತು, ಆರೋಗ್ಯ ತಪಾಸಣೆ ಮಾಡಿಸುವುದು ಬಹುಮುಖ್ಯ ಎಂದು ತಿಳಿಸಿದರು.

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ಸಾರ್ವಜನಿಕರು ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಿರಬೇಕು.
ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದ ಜನ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮೃತಪಡುತ್ತಿದ್ದಾರೆ. ಗ್ರಾಮೀಣ ಜನತೆ ಕೃಷಿ, ಹೈನುಗಾರಿಕೆ ಚಟುವಟಿಕೆ ಒತ್ತಡದ ನಡುವೆ ಆರೋಗ್ಯ ನಿರ್ಲಕ್ಷಿಸುತ್ತಾರೆ. ಆರಂಭದಲ್ಲೇ ಚಿಕಿತ್ಸೆ ನೀಡಲು ಆರೋಗ್ಯ ಶಿಬಿರಗಳು ಪೂರಕ ಎಂದು ಸಲಹೆ ನೀಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರ ಆಯೋಜನೆ ಮಾಡಲಾಗಿದೆ. ನಮಗೆ ಇಂದು ಹೆಚ್ಚಿನ ಬೆಂಬಲ ನೀಡಿದ್ದೀರಿ, ಜನತೆ ಆರೋಗ್ಯದ ಕಡೆಗೆ ಗಮನ ಹರಿಸಬೇಕು, ನಾವು ಸದಾ ನಿಮ್ಮ ಸೇವೆಗೆ ಬದ್ಧರಾಗಿರುತ್ತೇವೆ. ತಾವುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸಾರ್ವಜನಿಕರು ಡಾ. ನಾರಾಯಣಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವದು ಸಂತಸ ತಂದಿದೆ, ಬಿಕ್ಕೋಡು ಭಾಗದ ಬಡ ಕಾರ್ಮಿಕರಿಗೆ, ಆಟೋ ಚಾಲಕರಿಗೆ ಈ ಶಿಬಿರ ಸಾಕಷ್ಟು ಅನುಕೂಲವಾಗಿದೆ. ರೋಗಿಗಗಳ ಹಿತ ಸಕ್ತಿ ಕಾಪಾಡುತ್ತ ತನ್ನ ಬಂಧು ಭಾಂಧವರಂತೆ ರೋಗಿಗಳನ್ನು ವಿಚಾರಿಸಿಕೊಂಡು ಚಿಕಿತ್ಸೆ ನೀಡುವ ಡಾ ನಾರಾಯಣಸ್ವಾಮಿ ಅವರಿಗೆ ಇನ್ನಷ್ಟು ಸಮಾಜ ಸೇವೆ ಮಾಡುವ ಆ ಭಗವಂತ ಕರುಣಿಸಲಿ ಎಂದು ಆಶಿಸಿದರು.

ಇದೇ ಸಂಧರ್ಭದಲ್ಲಿ ಆಟೋ ಚಾಲಕರು ಮತ್ತು ಮಾಲಿಕರು ಹಾಗೂ ಸಾರ್ವಜನಿಕರು ಬಿಪಿ, ಶುಗರ್,ಇತರೆ ಕಾಯಿಲೆಗಳ ಆರೋಗ್ಯ ತಪಾಸಣೆ ಮಾಡಿಸಿಕೊಂಡರು, ಮಾಹಿತಿ ನೀಡಿ,ಅವರಿಗೆ ಆಸ್ಪತ್ರೆಗೆ ಬರುವಂತೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜು, ಗೌರವ ಅಧ್ಯಕ್ಷ ಕಾಂತರಾಜು, ಖಂಜಾಂಜಿ ಧರ್ಮೇಶ್ , ಉಪಾಧ್ಯಕ್ಷ ಅಕ್ರಮ್, ಕಾರ್ಯದರ್ಶಿ ಲೋಕೇಶ್, ಧರ್ಮರಾಜು, ತೇಜಸ್,
ನಿಂಗರಾಜು, ಚನ್ನರಾಜು ಸೇರಿದಂತೆ ಇತರರು ಹಾಜರಿದ್ದರು.
