
ಮಾರ್ನಿಂಗ್ ಕ್ವಿಕ್ ನ್ಯೂಸ್ ಟೈಮ್
ಶುಭೋದಯ
ಅದೃಷ್ಟ ವೆನ್ನುವುದು ಪ್ರಯತ್ನವೆಂಬ ತಾಯಿಗೆ
ಅವಕಾಶವೆಂಬ ತಂದೆಗೆ ಜನಿಸುವ ಮಗು
–ಗುರುನಾನಕ್
******************
1.IND vs AUS: ಸೆಮಿಫೈನಲ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
India vs Australia Semifinal: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಮಾರ್ಚ್ 4 ರಂದು ದುಬೈನಲ್ಲಿ ನಡೆಯಲಿದೆ. ದುಬೈ ಪಿಚ್ ಸ್ಪಿನ್ನರ್ಗಳಿಗೆ ಅನುಕೂಲಕರವಾಗಿದೆ. ಪಂದ್ಯದ ದಿನದಂದು ಶೇ. 10 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
2.ಸೌಮ್ಯ ರೆಡ್ಡಿ ಚುನಾವಣಾ ತಕರಾರು: ಬಿಜೆಪಿ ಶಾಸಕ ರಾಮಮೂರ್ತಿಗೆ ಶಾಕ್ ಕೊಟ್ಟ ಸುಪ್ರೀಂಕೋರ್ಟ್
ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆ ಅಸಿಂಧು ಕೋರಿ ಜಯನಗರ ಶಾಸಕರ ವಿರುದ್ಧ ಸೌಮ್ಯ ರೆಡ್ಡಿ ಸಲ್ಲಿಸಿದ ಚುನಾವಣಾ ಅರ್ಜಿಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿ.ಕೆ. ರಾಮಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ರಾಮಮೂರ್ತಿ ಅವರಿಗೆ ಲಿಖಿತ ಹೇಳಿಕೆ ಸಲ್ಲಿಸಲು ಮೂರು ವಾರಗಳ ಅವಕಾಶ ನೀಡಲಾಗಿದೆ.
****************************
3.ಜಗತ್ತಿನ ಅತಿದೊಡ್ಡ ಕ್ರೀಡಾ ಪ್ರಶಸ್ತಿಗೆ ರಿಷಭ್ ಪಂತ್ ನಾಮನಿರ್ದೇಶನ
Rishabh Pant: ರಿಷಭ್ ಪಂತ್ ಅವರು 2025 ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯ “ವರ್ಷದ ಕಮ್ಬ್ಯಾಕ್” ವಿಭಾಗಕ್ಕೆ ನಾಮನಿರ್ದೇಶನಗೊಂಡಿದ್ದಾರೆ. 2022 ರ ಡಿಸೆಂಬರ್ನಲ್ಲಿ ಗಂಭೀರ ಕಾರು ಅಪಘಾತಕ್ಕೀಡಾಗಿದ್ದ ಪಂತ್ ಮತ್ತೆ ಚೇತರಿಸಿಕೊಂಡು ಕ್ರಿಕೆಟ್ ಮರಳಿದ್ದೆ ರೋಚಕ ಇತಿಹಾಸ. ಅಲ್ಲದೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ನಾಲ್ಕನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ.
4.ಶಾಸಕರಿಗೆ ಸಿಹಿ ಸುದ್ದಿ: ಸಂಬಳ ಹೆಚ್ಚಳ ಜೊತೆಗೆ ಎಂಎಲ್ಎಗಳಿಗೆ ರಿಕ್ಲೈನರ್, ಮಸಾಜ್ ಚೇರ್ಗಳು
ಕರ್ನಾಟಕದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಯ ದುಡ್ಡು ಇನ್ನೂ ಅಕೌಂಟ್ಗೆ ಬಂದಿಲ್ಲ ಅಂತ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ದುಬಾರಿ ದುನಿಯಾದಲ್ಲಿ ಜನ ಸಾಮಾನ್ಯರಿಗೆ ಮಾತ್ರ ಬೆಲೆ ಏರಿಕೆಯ ಬರೆ. ಈ ಬೆಲೆ ಏರಿಕೆ ಬಗ್ಗೆ ಜನರು ಬೇಸರಗೊಂಡಿರುವ ಮಧ್ಯೆ ಶಾಸಕರ ಸಂಬಳ ಹೆಚ್ಚಿಸುವ ಬಗ್ಗೆ ಚರ್ಚೆಯಾಗಿದೆ. ಮತ್ತೊಂದೆಡೆ ಶಾಸಕರಿಗಾಗಿ ವಿಧಾನಸೌಧಕ್ಕೆ ರಿಕ್ಲೈನರ್ ಹಾಗೂ ಮಸಾಜ್ ಚೇರ್ಗಳು ಬಂದಿವೆ.
5.Dr B R Ambedkar ಕುರಿತು ವ್ಯಂಗ್ಯ ನಾಟಕ: ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ಪ್ರಕರಣ ರದ್ದು ಮಾಡಿದೆ. ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ಅಭಿಪ್ರಾಯುಪಟ್ಟಿದೆ.