ಹೊಸದಿಲ್ಲಿ: ಬ್ಯಾಂಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸುವ ಉದ್ದೇಶದಿಂದ, 2017ರಲ್ಲಿ ಕೈಗೊಳ್ಳಲಾಗಿದ್ದ ಸರಕಾರಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆಯನ್ನು ಪುನರಾರಂಭಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ.
‘ವಿಕಸಿತ ಭಾರತ’ ಉಪಕ್ರಮದ ಅಡಿಯಲ್ಲಿ ಜನರಿಗೆ ಬ್ಯಾಂಕ್ಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲಾಗುತ್ತಿದೆ. ವಿಕಸಿತ ಭಾರತದ ಗುರಿ ಸಾಧನೆಗಾಗಿ ಅಗತ್ಯವಾದ ಹಣಕಾಸು ಸಂಪನ್ಮೂಲಗಳನ್ನು ಒದಗಿಸಲು ಬ್ಯಾಂಕಿಂಗ್ ಕ್ಷೇತ್ರವನ್ನು ಹೇಗೆ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಬಗ್ಗೆ ಸಮಿತಿಯು ಸಲಹೆ ನೀಡಲಿದೆ ಎಂದು ಸಚಿವೆ ತಿಳಿಸಿದರು.
ಬ್ಯಾಂಕ್ಗಳ ಬಂಡವಾಳ ಶಕ್ತಿ, ಕಾರ್ಯಕ್ಷಮತೆ ಹಾಗೂ ಸಾಲ ವಿತರಣೆ ಸಾಮರ್ಥ್ಯ ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮಗಳನ್ನು ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು.
