ಶ್ಲೋಕ – 21
ತೇ ತಂ ಭುಕ್ತ್ವಾ ಸ್ವರ್ಗಲೋಕಂ ವಿಶಾಲಂ ಕ್ಷೀಣೇ ಪುಣ್ಯೇ ಮರ್ತ್ಯಲೋಕಂ ವಿಶಂತಿ ।
ಏವಂ ತ್ರಯೀಧರ್ಮಮನುಪ್ರಪನ್ನಾಃ ಗತಾಗತಂ ಕಾಮಕಾಮಾ ಲಭಂತೇ ॥೨೧॥
ಅವರು ಹಿರಿದಾದ ಸಗ್ಗಿಗರ ನಾಡನ್ನು ಕಂಡುಂಡು, ಪುಣ್ಯ ಮುಗಿದಾಗ ಭೂಮಿಗೆ ಮರಳುತ್ತಾರೆ.
ಹೀಗೆ ವೈದಿಕ ಕರ್ಮಗಳ ಮೊರೆ ಹೊಕ್ಕು, ಬಯಕೆಗಳ ಬೆನ್ನುಹತ್ತಿ ಅತ್ತಿಂದಿತ್ತ ಅಲೆದಾಡುತ್ತಿರುತ್ತಾರೆ.
ಸ್ವರ್ಗದ ಬಯಕೆಯಿಂದ ಪುಣ್ಯಕರ್ಮ ಮಾಡುವ ತ್ರೈವಿದ್ಯರು ಸ್ವರ್ಗವನ್ನು ಸೇರಿ ಅಲ್ಲಿ ಬಗೆ ಬಗೆಯ ಭೋಗವನ್ನು ಅನುಭವಿಸಿ ತಮ್ಮ ಸತ್ಕರ್ಮದ ಫಲ ಮುಗಿದ ತಕ್ಷಣ ಪುನಃ ಭೂಲೋಕದಲ್ಲಿ ಹುಟ್ಟುತ್ತಾರೆ. ಈ ಕಾರಣದಿಂದ ಇವರು ಅತ್ಯಂತ ಹಿರಿದಾದ ಮೋಕ್ಷದಿಂದ, ಭಗವಂತನಿಂದ ವಂಚಿತರಾಗುತ್ತಾರೆ. ಇವರು ಸದಾ ಬಯಕೆಗಳ ಬೆನ್ನು ಹತ್ತಿ ಚಕ್ರಭ್ರಮಣದಲ್ಲಿ ಸಿಲುಕಿ ಕೊಳ್ಳುತ್ತಾರೆ.
ಇವರಿಗಿಂತ ತೀರ ಭಿನ್ನ ನಡೆ ಭಾಗವತರದ್ದು:
