ಕೆ.ಆರ್.ಪೇಟೆ: ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳ ಜಾಣ್ಮಯನ್ನು ಗುರುತಿಸಲು ಶಾಲೆಯಲ್ಲಿ ನಡೆಯುವ ಮಕ್ಕಳ ಸಂತೆ ಸಹಕಾರಿಯಾಗಲಿದೆ ಎಂದು ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಸುನಿಲ್ ಸಣ್ಣಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶಾಲಾ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಇದೆ ಮೊದಲ ಬಾರಿಗೆ ನಮ್ಮ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಮಕ್ಕಳು ತುಂಬ ಉತ್ಸಾಹದಿಂದ ಮನೆಯಿಂದಲೇ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದಾರೆ. ಆಹಾರ ಹೇಗೆ ತಯಾರು ಮಾಡಬೇಕು, ಅದಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ತಿಳಿವಳಿಕೆ, ಶುಚಿ-ರುಚಿಯ ಬಗ್ಗೆ ತಿಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.

ಬಳಿಕ ಶಾಲೆ ಮುಖ್ಯ ಶಿಕ್ಷಕಿ ಗಿರಿಜಮ್ಮ ಮಾತನಾಡಿ ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಹತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಅಂದರೆ ಮಕ್ಕಳಲ್ಲಿ ಲೆಕ್ಕಾಚಾರ ಪ್ರವೃತ್ತಿ ಹಾಗೂ ಗ್ರಾಹಕರೊಂದಿಗೆ ವರ್ತಿಸುವ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದರು.
ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ವಿವಿಧ ರೀತಿಯ ತಿಂಡಿ ತಿನಿಸುಗಳು, ತರಕಾರಿಗಳು ಹಾಗೂ ಇತರ ಪದಾರ್ಥಗಳನ್ನು ಮಾರಾಟ ಮಾಡಿ ಸಂಭ್ರಮಿಸಿದರು. ಪಾಲಕರು ಮಕ್ಕಳು ತಯಾರಿಸಿದ ಪದಾರ್ಥಗಳ ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತರಕಾರಿ, ತಂಪು ಪಾನೀಯ, ಪಾನಿಪುರಿ, ಬೇಲ್ ಪುರಿ, ಸೊಪ್ಪು ಇತರ ಪದಾರ್ಥಗಳನ್ನು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ
ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶೈಲಜಾ,ಶಾಲಾ ಮುಖ್ಯ ಶಿಕ್ಷಕಿ ಗಿರಿಜಮ್ಮ, ಶಿಕ್ಷಕ ಚೇತನ್, ಪುಟ್ಟಪ್ಪ ಕೆ.ಎಂ,ಮಂಜೇಗೌಡ ಎಂ.ಜೆ,ಪೋಷಕರಾದ ಕುಮಾರಿ ಯೋಗೇಶ್,ಮಂಜೇಶ್,ಶಂಕರ್, ರಾಧಾ,ಬಸವರಾಜು,ಚಲುವರಾಜು, ಭಾಗ್ಯ, ಹಾಗೂ ಗ್ರಾ. ಪಂ ಪಂಚಾಯತಿ ಅಧ್ಯಕ್ಷರು ಸದಸ್ಯರು ಗ್ರಾಮಸ್ಥರು ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
