ಕೆ.ಆರ್.ಪೇಟೆ:ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ತರಬೇತಿ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಂಡಿಹೊಳೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವನ್ನು ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಸರಿಯಾಗಿ ಉದ್ಘಾಟಿಸಿ ಮಾತನಾಡಿದರು.
ಸಾಮಾನ್ಯವಾಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಖಾಸಗಿ ಶಾಲೆಗಳು ಆದ್ದೂರಿಯಾಗಿ ಆಚರಣೆ ಮಾಡುತ್ತವೆ. ಶತಮಾನ ಹೊತ್ತಿನಲ್ಲಿರುವ ಬಂಡಿಹೊಳೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರ ಸಹಕಾರ ಪಡೆದು ಆದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದ ಅವರು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಉಚಿತ ಶಿಕ್ಷಣ ಒದಗಿಸುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ ಎಂದರು.
ಬಳಿಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕೆ.ಆರ್.ಪೇಟೆ.ತಾಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಸರ್ಕಾರಿ ಶಾಲಾ ವಾರ್ಷಿಕೋತ್ಸವ ಎಂದರೆ ಹೀಗೆಯೇ ಇರಬೇಕು ಎನ್ನುವುದನ್ನು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಧರ್ ಹಾಗೂ ಅಧ್ಯಾಪಕ ವೃಂದದವರು ಸಿದ್ಧ ಮಾದರಿಯನ್ನು ತೋರಿಸಿಕೊಟ್ಟಿದ್ದಾರೆ. ಎಸ್.ಡಿ.ಎಂ.ಸಿ- ಸಾರ್ವಜನಿಕರು-ದಾನಿಗಳು ಸಹಕಾರ ನೀಡಿದ್ದಾರೆ. ಇಲ್ಲಿ ಅಳವಡಿಸಿಕೊಂಡ ನೃತ್ಯಗಳು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಿವೆ. ಸಂಸ್ಕೃತಿ, ಸಾಂಸ್ಕೃತಿಕ ಮೌಲ್ಯಗಳ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವಲ್ಲಿ ಇಂತಹ ಹೊಸತನದ ಅಗತ್ಯತೆ ಇರುತ್ತದೆ. ಎಲ್ಲರೂ ಒಗ್ಗಟ್ಟಿನಲ್ಲಿ ಸರ್ಕಾರಿ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಲು ಶ್ರಮಿಸೋಣ ಎಂದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಸಂಜೆ, ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ, ವಿದ್ಯಾರ್ಥಿಗಳಿಂದ ವೈವಿದ್ಯಮಯ ನೃತ್ಯ ಕಲರವ ಅಪರೂಪದ ಜಾನಪದ ನೃತ್ಯಗಳನ್ನು ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶಿಸಿ ಪ್ರೇಕ್ಷಕರು ಹಾಗೂ ಪೋಷಕರ ಮನಗೆದ್ದರು.
ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಶ್ವಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಪದ್ಮೇಶ್ ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ್, ಸರ್ಕಾರಿ ಎಸ್ಸಿ – ಎಸ್ಟಿ ನೌಕರರ ಸಂಘದ ಅಧ್ಯಕ್ಷ ಶಿಕ್ಷಕ ಯೋಗೇಶ್,ಸರ್ಕಾರಿ ಶಿಕ್ಷಕ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಕೆ ದೇವರಾಜು,ಶಿಕ್ಷಕ ಗುಡುಗನಹಳ್ಳಿ ಮಂಜುನಾಥ್,ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶೋಕ್,ಗ್ರಾಮದ ಹಿರಿಯ ಮುಖಂಡರಾದ ಜಗದೀಶ್,ವಿಶ್ವನಾಥ್,ಸೊಸೈಟಿ ಅಧ್ಯಕ್ಷ ಗಣೇಶ್,ಕಾಯಿ ಮಂಜುನಾಥ್,ಶಾಲೆ ಮುಖ್ಯ ಶಿಕ್ಷಕರಾದ ಶ್ರೀಧರ್,ವೆಂಕಟೇಶ್, ಸುನಿಲ್, ನಾಗೇಶ್, ಚಲುವಮ್ಮ, ಕುಮಾರ್, ದರ್ಶನ್, ಲಾಲಾವತಿ ಜಯರಾಮ್, ಪುಷ್ಪ,ಡೈರಿ ಹರೀಶ್,ಅಧ್ಯಕ್ಷ ಸಂತೋಷ್,ಮುಖಂಡ ಪುರುಷೋತ್ತಮ್,ರಂಗನಾಥಗೌಡ ಸಣ್ಣತಮ್ಮೆಗೌಡ, ಸಿದ್ದರಾಮಣ್ಣ, ವೆಂಕಟೇಶ್, ಶಿವಕುಮಾರ್,ಸಿ.ಆರ್.ಪಿ ಸುರೇಶ, ದಿನೇಶ್, ಸೇರಿದಂತೆ ಉಪಸ್ಥಿತರಿದ್ದರು
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
