ಬೇರೆಡೆಗೆ ಬಗೆಗೊಡದೆನನ್ನಲ್ಲೇ ಭಕ್ತಿಯಿಡುವವನು ಎಂಥ ನಡತೆಗೇಡಿಯಾದರೂ ಮೂಲತಃ ಒಳ್ಳೆಯವನೆಂದೇ ತಿಳಿಯಬೇಕು.ಏಕೆಂದರೆ ಅವನು ಖಚಿತವಾಗಿ ನಿಜವನರಿತವನು
ನಿಜವಾದ ಭಕ್ತರು ಸಾಮಾನ್ಯವಾಗಿ ಎಂದೂ ದುರಾಚಾರಿಗಳಾಗಿರುವುದಿಲ್ಲ. ಆಕಸ್ಮಾತ್ ಒಬ್ಬಸಾತ್ವಿಕ ಯಾವುದೋ ಪ್ರಾರಬ್ಧ ಕರ್ಮದಿಂದ ಒಂದು ಜನ್ಮದಲ್ಲಿ ನಡತೆಗೇಡಿಯಾಗಿದ್ದರೂ ಸಹ ಆತಮೂಲತಃ ಉತ್ತಮನೇ ಆಗಿರುತ್ತಾನೆ. ಏಕೆಂದರೆ ಆತ ತನ್ನ ಅನೇಕ ಜನ್ಮದಲ್ಲಿ ಭಗವತ್ ಸಾಧನೆಮಾಡಿರುತ್ತಾನೆ. ಇದು ಸಾಮಾನ್ಯರಾದ ನಮಗೆ ಕಾಣದಿದ್ದರೂ ಕೂಡಾ ಭಗವಂತನಿಗೆ ಕಾಣುತ್ತದೆ.ಭಗವಂತನ ದೃಷ್ಟಿಯಲ್ಲಿ ಆತ ಉತ್ತಮನೆನಿಸಿರುತ್ತಾನೆ. ಈ ಕಾರಣಕ್ಕಾಗಿ ನಾವು ಯಾರನ್ನೂಹಗುರವಾಗಿ ಕಾಣಬಾರದು. ಒಬ್ಬ ಕೆಟ್ಟ ದಾರಿಯಲ್ಲಿ ನಡೆಯುತ್ತಿದ್ದರೆ ಅದಕ್ಕೆ ಅನೇಕಕಾರಣಗಳಿರಬಹುದು. ಆತ ಸಾತ್ವಿಕನೂ ಇರಬಹುದು. ಆದರೆ ಆತನ ಪ್ರರಾಬ್ಧ ಕರ್ಮ ಆತನನ್ನು ಆಮಾರ್ಗದಲ್ಲಿ ನಡೆಯುವಂತೆ ಮಾಡಿರಬಹುದು. ಉತ್ತಮನೆನಿಸಿದವನು ಶಾಶ್ವತವಾಗಿ ಆ ದಾರಿಯಲ್ಲಿಸಾಗುವುದಿಲ್ಲ ಎನ್ನುತ್ತಾನೆ ಕೃಷ್ಣ .
[…] ಭಗವದ್ಗೀತೆ ಅಧ್ಯಾಯ-9 , ಶ್ಲೋಕ –30 […]