ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ಸಮೀಪದ ಬುದ್ದಿವಂತನಹಳ್ಳಿ ಗ್ರಾಮದಲ್ಲಿ ದೇವಾಲಯದ ಅರ್ಚಕನ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿರುವ ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೂಜಾರಿ ಹರೀಶ್ ಸ್ವಾಮಿ ಅವರು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದು, ಪೂಜೆಯ ಹೆಸರಿನಲ್ಲಿ ಮಹಿಳೆಯರನ್ನು ವಂಚಿಸಿ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆಯೆಂಬ ಆರೋಪಗಳು ಕೇಳಿಬಂದಿವೆ. ಸ್ವತಃ ತಾನೇ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದು, ಅವುಗಳು ವಾಟ್ಸಪ್ ಮೂಲಕ ಹರಿದಾಡುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಮದ್ಯಪಾನ, ಜೂಜಾಟ ಸೇರಿದಂತೆ ಅನಾಚಾರ ಚಟುವಟಿಕೆಗಳಲ್ಲಿ ತೊಡಗಿರುವ ಸ್ವಭಾವದ ಬಗ್ಗೆ ಕೂಡ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬುದ್ದಿವಂತನಹಳ್ಳಿ ಗ್ರಾಮದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ದೇವಾಲಯದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಭಕ್ತರು ಹೇಳಿದ್ದಾರೆ.
ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಘಟನೆ ಸ್ಥಳವು ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತಿಳಿದುಬಂದಿದೆ.
ಪೊಲೀಸ್ ಇಲಾಖೆ ದೂರು ದಾಖಲಿಸಿದ ನಂತರವೇ ಪ್ರಕರಣದ ನಿಜಾಸ್ಥಿತಿ ಬಹಿರಂಗವಾಗಲಿದೆ ಎಂದು ಮೂಲಗಳು ತಿಳಿಸಿವೆ
