ಹಾಸನ: ಮುಖಂಡ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹೊಳೆನರಸೀಪುರ ಮೂಲದ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಹಿಳೆ ಹೇಳುವ ಪ್ರಕಾರ, ನೆನ್ನೆ ಮಧ್ಯಾಹ್ನ ಸುಮಾರು 12:30ರ ವೇಳೆ ಮನೆಯ ಬಳಿ ವಿಷ ಸೇವನೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ. “ನಾನು ಜೈಲಿಗೆ ಹೋಗಿದ್ದೇನೆ ಎಂದು ದೇವರಾಜೇಗೌಡ ಅವರು ಹೇಳಿರುವುದರಿಂದ ಸಮಾಜದಲ್ಲಿ ನನಗೆ ಅವಮಾನವಾಗಿದೆ. ಸಿಕ್ಕಸಿಕ್ಕವರೆಲ್ಲಾ ಈ ಬಗ್ಗೆ ಕೇಳುತ್ತಿದ್ದಾರೆ. ಮನೆಯಲ್ಲಿಯೂ ನೆಮ್ಮದಿ ಇಲ್ಲದಾಗಿದೆ. ಸಮಾಜದಲ್ಲಿ ಬದುಕಲು ಆಗದ ಪರಿಸ್ಥಿತಿ ಉಂಟಾಗಿದೆ. ಅದರಿಂದ ವಿಷ ಕುಡಿದೆ” ಎಂದು ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಮಹಿಳೆಯ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಘಟನೆ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.
