ಹಾಸನ: ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಮಾರ್ಚ್ 7ರಂದು ಹಾಸನದಲ್ಲಿ ಭಾರಿ ಪ್ರಮಾಣದ ಯುವ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅವರು ಆಕಾಶವಾಣೆಯ ಆವರಣದಲ್ಲಿಂದು ಉದ್ಯೋಗ ಮೇಳದ ಪ್ರಚಾರ ವಾಹನಕ್ಕೆ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು Karnataka Skill Development Corporation (KSDC), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳವು Government Engineering College, Hassan ಆವರಣದಲ್ಲಿ ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ನಡೆಯಲಿದೆ. ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸುವ ನಿರೀಕ್ಷೆಯಿದೆ. ಪದವಿ, ಡಿಪ್ಲೊಮಾ, ಐಟಿಐ ಹಾಗೂ ಇತರ ಅರ್ಹತೆ ಹೊಂದಿರುವ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಉದ್ಯೋಗಾರ್ಥಿಗಳು ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ಸಂದರ್ಶನಗಳಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವವಿದ್ದು, ಯುವಕರ ಉದ್ಯೋಗಾರ್ಹತೆ ಹೆಚ್ಚಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಪ್ರಕಟಿಸಿರುವ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ಈ ವೇಳೆ ಡಿಎಸ್ ಡಿ ಒ ವಿಜಯಲಕ್ಷ್ಮಿ, ಡಿಸೈಪಲ್ಸ್ ಇಂಡಿಯಾದ ಎಕ್ಸ್ ಕ್ಯೂಟಿವ್ ಡೈರೆಕ್ಟರ್, ಶಿವಪ್ರಸಾದ್ ಕೆ ,ಎಂ. ಮತ್ತು ಮುಂತಾದವರು ಹಾಜರಿದ್ದರು.