ಪೆಶಾವರ: Pakistan ಸರ್ಕಾರವು Gilgit-Baltistan ಪ್ರದೇಶದಲ್ಲಿ ಸೇನೆಯನ್ನು ನಿಯೋಜಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.
Iran ಮೇಲೆ United States ಮತ್ತು Israel ನಡೆಸಿದ ದಾಳಿ ಹಾಗೂ ಇರಾನ್ನ ಪರಮೋಚ್ಚ ನಾಯಕ Ali Khamenei ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದೆಲ್ಲೆಡೆ ಭುಗಿಲೆದ್ದಿರುವ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದಿವೆ. ಈವರೆಗೆ ನಡೆದ ಘರ್ಷಣೆಗಳಲ್ಲಿ ಒಟ್ಟು 26 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.
ಪ್ರತಿಭಟನೆಗಳನ್ನು ನಿಯಂತ್ರಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಗಿಲ್ಗಿಟ್ ಮತ್ತು Skardu ನಗರಗಳಲ್ಲಿ ಮೂರು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಸಚಿವ ಗುಲಾಂ ಅಬ್ಬಾಸ್ ತಿಳಿಸಿದ್ದಾರೆ.
ಸ್ಕರ್ದುನಲ್ಲಿರುವ ವಿಶ್ವಸಂಸ್ಥೆಯ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದು, ನಂತರ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಸೈನಿಕ ಸೇರಿದಂತೆ 14 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಇದೇ ವೇಳೆ Karachiಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಭಾನುವಾರ ನಡೆದ ಘರ್ಷಣೆಯಲ್ಲಿ 10 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. Islamabadನಲ್ಲಿಯೂ ನಡೆದ ಪ್ರತಿಭಟನೆ ವೇಳೆ ಇಬ್ಬರು ಸಾವಿಗೀಡಾಗಿದ್ದಾರೆ.
ಪಾಕಿಸ್ತಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಭದ್ರತಾ ಪಡೆಗಳು ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಕ್ರಮ ಕೈಗೊಂಡಿವೆ.
