ತುಮಕೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು, ಸತತ 17 ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಮಾಡಿರುವ ಸಿದ್ದರಾಮಯ್ಯ ಅವರನ್ನು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಸಲಹಾ ಸಮಿತಿ ಸದಸ್ಯರೂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಟಿ.ಜೆ.ಗಿರೀಶ್ ಅಭಿನಂದಿಸಿದ್ದಾರೆ.
ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ನಲ್ಲಿ ರೈಲ್ವೆ ಕಾಮಗಾರಿಗಳು, ಯಶವಂತಪುರ-ಕ್ಯಾತ್ಸAದ್ರ ರೈಲ್ವೆ ಕಾಮಗಾರಿಗಳ ಅಭಿವೃದ್ಧಿಗೆ ಒತ್ತು, ತುಮಕೂರು-ಹೊಸೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗೆ ಆದ್ಯತೆ, ಮೆಟ್ರೋ ವಿಸ್ತರಣೆಗೆ ಆದ್ಯತೆ ನೀಡಲಾಗಿದೆ. ತುಮಕೂರಿನ ಡಾ.ಗುಬ್ಬಿ ವೀರಣ್ಣ ರಂಗಮಂದಿರ ನವೀಕರಣ, ಕ್ಯಾನ್ಸರ್ ಕೇಂದ್ರ ಸ್ಥಾಪನೆಗೆ ಹಣ, ಕ್ರೀಡಾ ಮೂಲಸೌಕರ್ಯಕ್ಕೆ ಅಲ್ಪ ಹಣ ಮೀಸಲು, ಕೊರಟಗೆರೆ ತಾಲ್ಲೂಕಿನಲ್ಲಿ ಜಲಾಶಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಒಟ್ಟಾರೆಯಾಗಿ ಈ ಬಜೆಟ್ನಲ್ಲಿ ತುಮಕೂರಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ, ಮುಂದಿನ ದಿನಗಳಲ್ಲಿ ಆದ್ಯತೆ ಕೊಡಬೇಕು ಎಂದು ಟಿ.ಜೆ.ಗಿರೀಶ್ ಕೋರಿದ್ದಾರೆ.
– ಚಂದ್ರಚೂಡ ಕೆ.ಬಿ
