ಹಾಸನ: ತಾಲೂಕಿನ ಕಟ್ಟಾಯ ಹೋಬಳಿ ಅಂಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವಾಪುರ ಗ್ರಾಮದ ಬುದ್ಧ ವಿಹಾರ ಪರಿಮಿತಿಯಲ್ಲಿ ₹5 ಲಕ್ಷ ವೆಚ್ಚದಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಭೂಮಿಪೂಜೆ ಬಳಿಕ ಬುದ್ಧ ವಿಹಾರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ರಸ್ತೆ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಂಚಾರ ಸುಗಮವಾಗಲಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
