ಚನ್ನರಾಯಪಟ್ಟಣ: ತಾಲೂಕಿನಲ್ಲಿ ದುಡ್ಡಿಗಾಗಿ ಕಾರ್ಯನಿರ್ವಹಿಸುವ ಒಂದು ಟೀಮ್ ಇದೆ ಎಂದು ರೈತ ಸಂಘದ ಮುಖಂಡರಾದ ಸಿ.ಜಿ. ರವಿ ಆರೋಪಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನರಾಯಪಟ್ಟಣ ತಾಲೂಕು ಕಚೇರಿಯ ಕೆಲ ಅಧಿಕಾರಿಗಳು ಭ್ರಷ್ಟಾಚಾರ ಮಾಡುವಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದರು. ಇಂತಹ ಭ್ರಷ್ಟ ಅಧಿಕಾರಿಗಳಿಗೆ ದಲಿತ ಸಂಘಟನೆ ಹಾಗೂ ರೈತ ಸಂಘಟನೆಯ ಕೆಲವು ಮುಖಂಡರು ಬೆಂಬಲವಾಗಿ ನಿಂತು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಹೇಳಿದರು.
ದುಡ್ಡಿಗಾಗಿ ಕೆಲಸ ಮಾಡುವ ಉದ್ದೇಶದಿಂದಲೇ ದಲಿತ ಸಂಘ ಹಾಗೂ ರೈತ ಸಂಘದ ಕೆಲವರು ಸೇರಿಕೊಂಡು ಒಂದು ತಂಡವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ದೂರಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷರಾದ ಸಿ.ಜಿ. ರವಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾ ಅಧ್ಯಕ್ಷರಾದ ಗೊಲ್ಲರಹೊಸಹಳ್ಳಿ ಮಂಜುನಾಥ್, ತಾಲೂಕು ಅಧ್ಯಕ್ಷ ಗೋವಿನಕೆರೆ ತೇಜಸ್, ಕಾರ್ಯದರ್ಶಿ ಕಲ್ಕೆರೆ ವಾಸುದೇವ್, ವಳಗೆರಹಳ್ಳಿ ರಾಮಚಂದ್ರು, ಗುಲಸಿಂದ ಮಹೇಶ್, ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಮಂಜುನಾಥ್ ಐ ಕೆ
