ತುಮಕೂರು: ವಕೀಲರ ಕಲ್ಯಾಣ ಹಾಗೂ ವಕೀಲರ ಅಭ್ಯುದಯಕ್ಕಾಗಿ ಈ ಬಾರಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕು ಎಂದು ರಾಜ್ಯ ವಕೀಲರ ಪರಿಷತ್ ಸದಸ್ಯರು ಹಾಗೂ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಎಂ.ಎನ್. ಮಧುಸೂಧನ್ ತುಮಕೂರು ಜಿಲ್ಲಾ ವಕೀಲರ ಸಂಘದ ಸದಸ್ಯರಲ್ಲಿ ಮನವಿ ಮಾಡಿದರು.
ಮಾರ್ಚ್ 11ರಂದು ನಡೆಯುವ ರಾಜ್ಯ ವಕೀಲರ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿರುವುದಾಗಿ ತಿಳಿಸಿದ ಅವರು, ತಮ್ಮ ಕ್ರಮಸಂಖ್ಯೆ 57 ಆಗಿದ್ದು, ಅದಕ್ಕೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ತಮ್ಮಗೆ ಸೇವೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಕೀಲರಾದ ಶಶಿಶೇಖರ್, ನವೀನ್, ಮಂಜುನಾಥ್, ರಘು, ರಾಜೇಂದ್ರ, ದೊಡ್ಡಶಾಣಯ್ಯ ಸೇರಿದಂತೆ ಹಿರಿಯ, ಕಿರಿಯ ಹಾಗೂ ಮಹಿಳಾ ವಕೀಲರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
