ಟಿ.ನರಸೀಪುರ – ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ಮಾಡುವುದನ್ನು ಕೈ ಬಿಟ್ಟ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಕನ್ನಡಪರ ಹೋರಾಟಗಾರ ಎಸ್ ಕೆ ರಾಜೂಗೌಡ ತಿಳಿಸಿದರು.
ಪಾರಂಪರಿಕ ಕಾರ್ಖಾನೆಯ ಅವನತಿಗೆ ಕಾರಣವಾಗಲಿದ್ದ ಈ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಸರ್ಕಾರ ಕಾರ್ಖಾನೆಯ ಆ ಮೂಲಕ ಅಲ್ಲಿನ ನೌಕರರ ಬದುಕಿಗೆ ಭದ್ರತೆಯ ಭರವಸೆ ನೀಡುವ ಜೊತೆಗೆ ಮುಖ್ಯಮಂತ್ರಿಗಳ ಕ್ಷೇತ್ರ ಪಟ್ಟಣದಲ್ಲಿ ರುವ ಸರ್ಕಾರಿ ಸೌಮ್ಯದ ಏಕೈಕ ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರದ ಈ ನಿರ್ಧಾರ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ ಎಂದ ಅವರು ಇದಕ್ಕಾಗಿ ಸರ್ಕಾರಕ್ಕೆ ಮತ್ತು ಎಲ್ಲಾ ಹೋರಾಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದರು.
ಮೈಸೂರು ರೇಷ್ಮೆ ಉದ್ಯಮಗಳ ಪರಂಪರೆಯನ್ನು ಹೊಂದಿದ್ದ ಈ ಕಾರ್ಖಾನೆ ಆವರಣದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ಪ್ರಸ್ತಾವನೆಗೆ ನೌಕರರು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿ ನಿರಂತರವಾಗಿ ಪ್ರತಿಭಟನೆ ನಡೆಸಿದ ಫಲವಾಗಿ ಸರ್ಕಾರ ಒಳ್ಳೆಯ ತಿರ್ಮಾನ ತೆಗೆದುಕೊಳ್ಳುವ ಮೂಲಕ ಹೋರಾಟಗಾರರ ಹೋರಾಟಕ್ಕೆ ಸ್ಪಂದಿಸುವ ಮೂಲಕ ಮಾದರಿ ಹೆಜ್ಜೆ ಇಟ್ಟಿರುವುದು ಸಂತಸ ತಂದಿದೆ.
೧೧೪ ವರುಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರಿಂದ ಸ್ಥಾಪನೆಯಾಗಿ ಸುದೀರ್ಘ ರೇಷ್ಮೆ ಇತಿಹಾಸದ ಒಂದು ಪ್ರಮುಖ ಭಾಗವಾಗಿ ಬಂದಿರುವ ಈ ಪಾರಂಪರಿಕ ಐತಿಹಾಸಿಕ ಕಾರ್ಖಾನೆಯನ್ನು ಇರುವ ಸ್ಥಳದಲ್ಲಿಯೇ ಉಳಿಸಿಕೊಂಡು ನೂತನ ತಂತ್ರಜ್ಞಾನ ಬಳಸಿಕೊಂಡು ಕಾರ್ಖಾನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಕಾರ್ಖಾನೆಯ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕಂಚಿನ ಪ್ರತಿಮೆಯನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು.
- ರಾಜೂಗೌಡ
ಕನ್ನಡಪರ ಹೋರಾಟಗಾರರು
