ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ Veeranagamma Temple ದೇವಾಲಯದಲ್ಲಿ ಭಾರೀ ಕಳ್ಳತನ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಳ್ಳರು ಸಿನಿಮೀಯ ರೀತಿಯಲ್ಲಿ ದೇವಾಲಯದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ, ಅಲ್ಲಿದ್ದ ಸಿಸಿ ಕ್ಯಾಮೆರಾ ಡಿವಿಆರ್ ಅನ್ನು ಸಹ ಕೊಂಡೊಯ್ದಿದ್ದಾರೆ ಎಂದು ತಿಳಿದುಬಂದಿದೆ. ದೇವಸ್ಥಾನದ ಹುಂಡಿ ಹಾಗೂ ಅಲಂಕಾರದಲ್ಲಿದ್ದ ಸುಮಾರು 30 ಕೆ.ಜಿ. ಕ್ಕೂ ಅಧಿಕ ಬೆಳ್ಳಿ, 10 ಗ್ರಾಂ ಬಂಗಾರ ಸೇರಿದಂತೆ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಒಡವೆಗಳನ್ನು ಕಳ್ಳರು ದೋಚಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರತಿ ವರ್ಷ Ugadi ಸಂದರ್ಭದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆಯುವ ಈ ದೇವಾಲಯದಲ್ಲಿ ನಡೆದಿರುವ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಘಟನಾ ಸ್ಥಳಕ್ಕೆ ತುಮಕೂರಿನ ಆಡಿಷನಲ್ ಎಸ್ಪಿ ಪುರುಷೋತ್ತಮ್, ಮಧುಗಿರಿ ಡಿವೈಎಸ್ಪಿ ಮಂಜುನಾಥ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹಾಗೂ ಮುಜರಾಯಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದೆ.
ವರದಿ: ನರಸಿಂಹಯ್ಯ ಹೊಸಕೋಟೆ.
