ಬೆಂಗಳೂರು, ಮಾ.12: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಲು ಉದ್ದೇಶಿಸಿದ್ದ 384 ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ Personality Test (Interview) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಆಯೋಗದ ಪ್ರಕಟಣೆ ಪ್ರಕಾರ, 2026ರ ಮಾರ್ಚ್ 23ರಿಂದ ಮೇ 4ರವರೆಗೆ ಸಂದರ್ಶನ ನಡೆಸುವಂತೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದಾಗಿ ಈ ಸಂದರ್ಶನವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಜ್ಯೋತಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಹೊರಡಿಸಿರುವ ಪ್ರಕಟಣೆಯಲ್ಲಿ, ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ಸೈಟ್ ಹಾಗೂ ಪ್ರಕಟಣೆಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.
ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಾಥಮಿಕ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕಾಗಿತ್ತು. ಈಗ ಸಂದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಹೊಸ ವೇಳಾಪಟ್ಟಿಗಾಗಿ ಅಭ್ಯರ್ಥಿಗಳು ಕಾಯಬೇಕಾಗಿದೆ.
ಆಯೋಗವು ಮುಂದಿನ ದಿನಗಳಲ್ಲಿ ಹೊಸ ದಿನಾಂಕಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

