ರಾಮನಾಥಪುರ – ಕೊಣನೂರು ಹೋಬಳಿ ಚಿಕ್ಕಬೊಮ್ಮನಹಳ್ಳಿಯ ಶ್ರೀರಂಗನಾಥಸ್ವಾಮಿಯ ರಥೋತ್ಸವದಲ್ಲಿ ಹತ್ತಾರು ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಂದು ಶುಕ್ರವಾರ ಸಂಜೆ ಅದ್ದೂರಿಯಾಗಿ ರಥೋತ್ಸವ ನೆರವೇರಿತು.
ಚಿಕ್ಕಬೊಮ್ಮನಹಳ್ಳಿಯ ಮಠದ ಶ್ರೀ ರಂಗನಾಥಸ್ವಾಮಿಯ ರಥೋತ್ಸವದ ಅಂಗವಾಗಿ ದೇಗುಲವು ವಿವಿಧ ರೀತಿಯ ಹೂಗಳಿಂದ ಅಲಂಕೃತಗೊಂಡಿತ್ತು. ಗೋದೋಳಿ ಲಗ್ನದಲ್ಲಿ ಸಂಜೆ 5-30 ಗಂಟೆಗೆ ಸರಿಯಾಗಿ ಪ್ರಸನ್ನ ಶ್ರೀ ರಂಗನಾಥಸ್ವಾಮಿ ದೇಗುಲದ ಮುಂಭಾಗದಲ್ಲಿ ನಿಲ್ಲಿಸಿ ವಿವಿಧ ಪುಪ್ಪಗಳಿಂದ ಹಾಗೂ ಬಗ್ಗೆ ಬಗೆಯ ವರ್ಣದ ಬಟ್ಟೆಗಳಿಂದ ಅಲಂಕರಿಸಿದ 30 ಅಡಿ ಎತ್ತರದ ರಥದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹಷ್ರೋದ್ವಾರದೊಂದಿಗೆ ಸಾಮೂಹಿಕವಾಗಿ ರಥವನ್ನು ಎಳೆಯುತ್ತಾ ದೇವಸ್ಥಾನದ ಮುಂಭಾಗದಿಂದ ರಥದ ಚಿಕ್ಕಬೊಮ್ಮನಹಳ್ಳಿ ಗ್ರಾಮದ ಗಡಿಯವರೆಗೆ ತೆರಳಿ ಅಲ್ಲಿಂದ ಮತ್ತೆ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ನಿಲ್ಲಿಸಿದರು.
ಈ ಸಂದರ್ಭದಲ್ಲಿ ಅದಿಚುಂಚನಗಿರಿ ಶಾಖಾ ಮಠದ ಶಂಭುನಾಥಮಹಾಸ್ವಾಮೀಜಿ, ಕಬ್ಬಳಿ ಮಠದ ಶಿವಪುತ್ರಸ್ವಾಮಿಜಿ, ಮುಖಂಡರುಗಳು ಭಕ್ತರು ಭಾಗವಹಿಸಿದ್ದರು.
– ಕುಮಾರಸ್ವಾಮಿ
