ಕೊರಟಗೆರೆ : ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೊರಟಗೆರೆ ತಾಲ್ಲೂಕು ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ನಿವೇಶನ ಸಮಸ್ಯೆ, ಪಿಂಚಣಿ ಮಂಜೂರು, ಭೂ ದಾಖಲೆ ತಿದ್ದುಪಡಿ, ರೇಷನ್ ಕಾರ್ಡ್ ಸಮಸ್ಯೆ, ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಜನರಿಂದ ಬಂದ ಮನವಿಗಳನ್ನು ಜಿಲ್ಲಾಧಿಕಾರಿಗಳು ಗಮನದಿಂದ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಸರ್ಕಾರದ ವಿವಿಧ ಜನಪರ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು.
ಈ ಜನ ಸಂಪರ್ಕ ಸಭೆಯಲ್ಲಿ ಒಟ್ಟು 120 ಅರ್ಜಿಗಳನ್ನು ಸ್ವೀಕರಿಸಿದ್ದು ಕೊರಟಗೆರೆ ತಾಲೂಕಿನಲ್ಲಿ ಸರ್ಕಾರಿ ಸರ್ವೆ ವಿಳಂಬ. ರಾಜ ಕಾಲವೇ ಒತ್ತುವರಿ. ಬೆಸ್ಕಾಂ ಇಲಾಖೆಯಿಂದ ಸಮರ್ಪಕ ವಿದ್ಯುತ್ ಲಭ್ಯವಿಲ್ಲದಿರುವುದು. ಮುಂತಾದ ಸಮಸ್ಯೆಗಳ ಬಗ್ಗೆ ಆನ್ಲೈನ್ ದೂರು ದಾಖಲಾಗುತ್ತದೆ. ಈ ದೂರುಗಳಲ್ಲಿ ಗಂಭೀರ ಸಮಸ್ಯೆಗಳನ್ನು ಪ್ರಮುಖವಾಗಿ ದಾಖಲಿಸಿಕೊಂಡಿದ್ದೇವೆ.
ಸಾರ್ವಜನಿಕ ಪ್ರದೇಶದಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚು ಸಮಸ್ಯೆಗಳು ಕೇಳಿಬಂದಿದ್ದು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅನಗತ್ಯವಾಗಿ ಕಚೇರಿಗಳ ಸುತ್ತಾಡುವ ಪರಿಸ್ಥಿತಿ ಉಂಟಾಗಬಾರದು. ಜನರ ಸಮಸ್ಯೆಗಳನ್ನು ತಕ್ಷಣ ಗಮನಿಸಿ ಪರಿಹಾರ ನೀಡುವುದು ಅಧಿಕಾರಿಗಳು ಕರ್ತವ್ಯ ಎಂದು ಅವರು ತಿಳಿಸಿದರು.ಸಭೆಯಲ್ಲಿ ಹಲವಾರು ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಉಲ್ಲೇಖಿಸಿದರು. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ದುರಸ್ತಿ ಅಗತ್ಯ, ಶಾಲೆಗಳಲ್ಲಿನ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜನರು ವಿವರಿಸಿದರು. ಈ ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜನ ಸಂಪರ್ಕ ಸಭೆ ಮೂಲಕ ಜನರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳಲು ಮತ್ತು ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಾಧ್ಯವಾಗುತ್ತದೆ. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೆ ಬರಲು ಈ ರೀತಿಯ ಸಭೆಗಳು ಸಹಕಾರಿ ಆಗುತ್ತವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಸಾರ್ವಜನಿಕರು ಕೂಡ ತಮ್ಮ ಸಮಸ್ಯೆಗಳನ್ನು ಧೈರ್ಯವಾಗಿ ತಿಳಿಸಿ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಾರ್ವಜನಿಕ ಜನ ಸಂಪರ್ಕ ಸಭೆಗೆ ಭೇಟಿ ನೀಡಿದ್ದ ಮಾತನಾಡಿ : ತೀತ ಜಲಾಶಯ ನಿರ್ಮಾಣದ ವೇಳೆ ನಮ್ಮ ವೀರಾಪುರ ಗ್ರಾಮ ಮುಳುಗಡೆಯಾಗಿದು. ನಮ್ಮ ವಾಸಕ್ಕೆ ಪರ್ಯಾಯ ಸ್ಥಳವನ್ನು ನೀಡಿದ ಜಾಗವನ್ನು ಬೇರೆ ವ್ಯಕ್ತಿಯವರು ನಮ್ಮ ಜಾಗವೆಂದು ಆರೋಪ ಮಾಡುತ್ತಿದ್ದು. ಹೇಮಾವತಿ ಜಲಾಶಯದ ಅಧಿಕಾರಿಗಳ ನಿರ್ಲಕ್ಷದಿಂದ ಈ ಸಮಸ್ಯೆ ಸೃಷ್ಟಿಯಾಗಿದ್ದು ಅಧಿಕಾರಿಗಳೇ ಈ ಸಮಸ್ಯೆಗೆ ಪರಿಹಾರವನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಇಂದು ನಡೆದ ಜನ ಸಂಪರ್ಕ ಸಭೆ ಇಂದ ಜಿಲ್ಲಾಧಿಕಾರಿಗಳ ಸ್ಪಂದನೆ ಉತ್ತಮವಾಗಿತ್ತು. ಆದರೆ ಈ ಜನಸಂಪರ್ಕ ಸಭೆ ಏರ್ಪಡಿಸಲಾದ ಸಭಾಂಗಣ ಚಿಕ್ಕದಾಗಿದ್ದು. ಬಂದ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕೊರತೆ ಉಂಟಾಗಿದ್ದು ಬೇಸರವಾಯಿತು.
ಈ ಜನ ಸಂಪರ್ಕ ಸಭೆ ಮೂಲಕ ಸಾರ್ವಜನಿಕರಿಗೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳ ಮುಂದೆ ಮಂಡಿಸಲು ಅವಕಾಶ ದೊರೆತಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಮೂಲಕ ಆಡಳಿತ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್. ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ. ಮುಖ್ಯ ಕಾರ್ಯನಿರ್ವಣ ಅಧಿಕಾರಿ ಅಶ್ವಿಜ ಬಿ. ವಿ ತಾಲ್ಲೂಕು ದಂಡಾಧಿಕಾರಿಯಗಳು ಮಂಜುನಾಥ್. ಇಓ ಅಪೂರ್ವ. ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಭೆಯ ಸಂದರ್ಭದಲ್ಲಿ ಹಲವು ಮನವಿಗಳನ್ನು ಸ್ವೀಕರಿಸಲಾಗಿದ್ದು, ಕೆಲವು ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವ ಕ್ರಮ ಕೈಗೊಳ್ಳಲಾಯಿತು. ಉಳಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ವರದಿ : ನರಸಿಂಹಯ್ಯ ಹೊಸಕೋಟೆ
