ಕೆ.ಆರ್.ಪೇಟೆ, ಮಾ.13: ಮಂಡ್ಯ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ನಡೆದ ಜಿಲ್ಲಾ ಮಟ್ಟದ ಗಣಿತ ಕಲಿಕಾ ಆಂದೋಲನ ಪರೀಕ್ಷೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ತೂಳಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ವಿಶೇಷ ಸಾಧನೆಗೆ ಶಾಲೆಯ ಶಿಕ್ಷಕರಾದ ಕಿಕ್ಕೇರಿ ಮಂಜುನಾಥ್ ಹಾಗೂ ಶ್ರೀಮತಿ ಗಿರಿಜಾ ಗಂಗಾಧರ್ ಅವರು ನೀಡಿದ ಮಾರ್ಗದರ್ಶನ ಮತ್ತು ಪರಿಶ್ರಮ ಪ್ರಮುಖ ಕಾರಣವಾಗಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಲಕ್ಷ್ಮಿಪುರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ತೂಳಸಿ ನಿಂಗೇಗೌಡ ರಮೇಶ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ಸಹಕಾರದಿಂದ ಇಂತಹ ಸಾಧನೆ ಸಾಧ್ಯವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯ ಸಾಧನೆ ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
– ಮಂಜುನಾಥ್ ಐ.ಕೆ.
