ಚನ್ನರಾಯಪಟ್ಟಣ, ಮಾ.14: ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಜಿಲ್ಲಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಕಾಳೇನಹಳ್ಳಿ ಆನಂದ್ ಕುಮಾರ್ ಅವರು ಪಟ್ಟಣದ ಸ್ನೇಹಸೌಧ ನಿವಾಸದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಸಿ.ಕೆ. ಕುಸುಮಾ ಬಾಲಕೃಷ್ಣ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಳೇನಹಳ್ಳಿ ಆನಂದ್ ಕುಮಾರ್, “ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಭಾಷೆ, ನಾಡು-ನುಡಿಗಾಗಿ ನಿರಂತರವಾಗಿ ದುಡಿಯುತ್ತಾ ಬಂದಿದ್ದೇನೆ. ನನ್ನ ಕನ್ನಡಾಂಬೆ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ, ಈ ಬಾರಿ ನನ್ನನ್ನು ಬೆಂಬಲಿಸುವಂತೆ ಮಾನ್ಯ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದೇನೆ” ಎಂದು ತಿಳಿಸಿದರು.
ನಾಡಪ್ರಭು ಕೆಂಪೇಗೌಡ ವೇದಿಕೆಯನ್ನು ಸ್ಥಾಪಿಸಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ಹೇಳಿದ ಅವರು, “ಹಾಸನ ಜಿಲ್ಲೆಯ ಸಮಸ್ತ ಕನ್ನಡಿಗರು ನನ್ನನ್ನು ಬೆಂಬಲಿಸಿ, ಆಶೀರ್ವದಿಸಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಸಾಪ ಹಾಸನ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಕಾಳೇನಹಳ್ಳಿ ಆನಂದ್ ಅವರೊಂದಿಗೆ ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುರಾರ್ಜಿ ಮಂಜಣ್ಣ, ಕನ್ನಡಪರ ಹೋರಾಟಗಾರ ಕನ್ನಡ ವಾಸು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಾಳೇನಹಳ್ಳಿ ಗೋಪಾಲ್, ಪಿಎಸಿಸಿಎಸ್ ಮಾಜಿ ಅಧ್ಯಕ್ಷ ಕಾಳೇನಹಳ್ಳಿ ಮೊಗಣ್ಣ, ಗದ್ದೆ ರಾಮೇಶ್ವರಿ ಯುವಕರ ಸಂಘದ ಅಧ್ಯಕ್ಷ ರಾಜು, ಚಕ್ಕೆ ರಾಜು, ದಿಲೀಪ್, ಗುಂಡ, ಸಾಬ್ರು ಮಂಜಣ್ಣ, ಶಂಕರ್, ದಲಿತ ಸಂಘಟನೆ ಮುಖಂಡ ಶಂಕರ್, ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಉಮೇಶ್, ಪಾಪಣ್ಣ, ಕುಮಾರ್, ಜಯರಾಮ್, ಸಿಐಟಿಯು ಮುಖಂಡರಾದ ಗಿರೀಶ್, ಸುರೇಶ್, ಡಿ. ಕಾಳೇನಹಳ್ಳಿ ಗ್ರಾಮಸ್ಥರು ಹಾಗೂ ತಾಲೂಕಿನ ಕನ್ನಡಪರ ಹೋರಾಟಗಾರರು ಸೇರಿದಂತೆ ಹಲವರು ಹಾಜರಿದ್ದರು.
– ಮಂಜುನಾಥ್ ಐ.ಕೆ
