ತುಮಕೂರು: ನಗರದ ನೃಪತುಂಗ ಬಡಾವಣೆಯಲ್ಲಿರುವ ನಿರ್ಭಯ ಮಹಿಳಾ ಜಾಗೃತಿ ವೇದಿಕೆ (ರಿ) ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ತುಮಕೂರು ತಾಲ್ಲೂಕು ತಹಸೀಲ್ದಾರ್ ಶ್ರೀಮತಿ ಪಿ.ಎಸ್. ರಾಜೇಶ್ವರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಗೀತಾ ನಾಗೇಶ್, ಕಾರ್ಯದರ್ಶಿ ಶ್ರೀಮತಿ ನಂದಿನಿ ಎನ್., ಖಜಾಂಚಿ ಶ್ರೀಮತಿ ಜ್ಯೋತಿ ಆಚಾರ್ಯ ಅವರು ತಹಸೀಲ್ದಾರ್ರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಿದರು.
ಮಹಿಳಾ ಸಬಲೀಕರಣ, ಸಮಾಜದಲ್ಲಿ ಮಹಿಳೆಯರ ಪಾತ್ರ ಹಾಗೂ ಆಡಳಿತ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗಳನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳೆಯರ ಹಕ್ಕು, ಜಾಗೃತಿ ಮತ್ತು ಸ್ವಾವಲಂಬನೆ ಕುರಿತು ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.
ವೇದಿಕೆಯ ಪದಾಧಿಕಾರಿಗಳು ಮಹಿಳೆಯರ ಪ್ರಗತಿಗೆ ಸಮಾಜದ ಎಲ್ಲಾ ವಲಯಗಳಿಂದ ಬೆಂಬಲ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
– ಕೆ.ಬಿ.ಚಂದ್ರಚೂಡ
