ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ 7ನೇಯ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಡಾ. ಸಿ. ಸೋಮಶೇಖರ ಅವರು ಉದ್ಘಾಟಿಸಿದರು.
ಈ ಸಮ್ಮೇಳನದ ಸರ್ವಾಧ್ಯಕ್ಷರಾದ ಪರಮಪೂಜ್ಯರಾದ ಬೆಕ್ಕಿನ ಕಲ್ಮಠ ಆನಂದ ಪುರ ಮಠದ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ ಸುತ್ತೂರು ಮಠದ ಪೂಜ್ಯ ಜಗದ್ಗುರು ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು, ಲೋಕ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಬಿ ವೈ ರಾಘವೇಂದ್ರ ಅವರು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀರುದ್ರೇಗೌಡರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಹಾರುದ್ರ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು
