ಹಾಸನ/ಸುಬ್ರಹ್ಮಣ್ಯ, ಮಾ.30: ಸಂಯುಕ್ತ ಕರ್ನಾಟಕ ಲೋಕ ಶಿಕ್ಷಣ ಟ್ರಸ್ಟ್ ಅಧ್ಯಕ್ಷರು, ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಾಸನ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಶ್ರೀ ಆಶೋಕ್ ಹಾರನಹಳ್ಳಿ ಅವರು ದಂಪತಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಮಾರ್ಚ್ 29ರಂದು ಸಂಜೆ, ಆಶೋಕ್ ಹಾರನಹಳ್ಳಿ ದಂಪತಿಗಳು ಸುಬ್ರಹ್ಮಣ್ಯ ಮಠದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಾರ್ಚ್ 30ರಂದು ಭಾನುವಾರ ಬೆಳಿಗ್ಗೆ, ದೇವಸ್ಥಾನದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದರು.
ದೇವರ ದರ್ಶನದ ಬಳಿಕ ಶ್ರೀ ಆಶೋಕ್ ಹಾರನಹಳ್ಳಿ ದಂಪತಿಗಳನ್ನು ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಎಂ.ಎನ್. ಕುಮಾರಸ್ವಾಮಿ,
