ಚನ್ನರಾಯಪಟ್ಟಣ: ತಾಲೂಕಿನ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ವತಿಯಿಂದ “ಪದ್ಯಗಳ ಸಂಕ್ಷಿಪ್ತ ಅಧ್ಯಯನ” ಕುರಿತು ಈಚೆಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಎಫ್. ಬರ್ನಾರ್ಡ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳು ಪದ್ಯಗಳ ಅರ್ಥ, ಭಾವ ಹಾಗೂ ಸಾಹಿತ್ಯದ ಆಳವನ್ನು ತಿಳಿದುಕೊಳ್ಳುವ ಅಗತ್ಯತೆಯನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಕೆ. ಮಂಜುನಾಥ್, ಸಹಾಯಕ ಪ್ರಾಧ್ಯಾಪಕರಾದ ನಿಂಗರಾಜು, ಡಾ. ಎನ್.ಟಿ. ನಾಗರಾಜ, ಡಾ. ಬಿ.ಎನ್. ಚಂದ್ರಶೇಖರ್ ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ
