ಚನ್ನರಾಯಪಟ್ಟಣ: ಪಟ್ಟಣದ ಅಕ್ಷರ ಸ್ಕೂಲ್ ಆಫ್ ಎಕ್ಸಲೆನ್ಸಿ ಶಾಲಾ ಆವರಣದಲ್ಲಿ ಇಂದು ಸಂಜೆ ನಡೆಯಲಿರುವ ಭಾರತ–ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಅಂಗವಾಗಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶ್ರೀಲಂಕಾ ದೇಶದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಅಕ್ಷರ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸುನಿಲ್ ಪ್ಯಾಟ್ರಿಕ್ ಮತ್ತು ಶಿಕ್ಷಕ ವೃಂದ ಆತ್ಮೀಯವಾಗಿ ಬರಮಾಡಿಕೊಂಡರು.

ಸಾಂಸ್ಕೃತಿಕ ಸ್ನೇಹ, ಪರಸ್ಪರ ತಿಳುವಳಿಕೆ ಮತ್ತು ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಮನೋಭಾವ ವೃದ್ಧಿಗೆ ಈ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಭಾರತ ಮತ್ತು ಶ್ರೀಲಂಕಾ ದೇಶಗಳ ಸಂಸ್ಕೃತಿ, ಪರಂಪರೆ ಹಾಗೂ ಕಲಾ ವೈವಿಧ್ಯತೆಯನ್ನು ಪರಿಚಯಿಸುವ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ.

