ಕೊರಟಗೆರೆ:- ಕೊರಟಗೆರೆ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಂದು ಕೊರಟಗೆರೆ ಪಟ್ಟಣದಲ್ಲಿ ಮಹಾನ್ ಸಮಾಜ ಸುಧಾರಕರಾದ ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಗೊಳಿಸಲಾಗಿ ಅಂಬೇಡ್ಕರ್ ಹಾಗೂ ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಲಾಯಿತು.
ತಹಶೀಲ್ದಾರ್ ಮಂಜುನಾಥ ಮಾತನಾಡಿ ಡಾ. ಅಂಬೇಡ್ಕರ್ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ನಾಯಕರು ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಮಾಜ ಸ್ವಾಸ್ಥ್ಯ ಕಾಪಾಡುವಲ್ಲಿ ಇಬ್ಬರು ಮಹಾನ್ ಚೇತನಗಳ ಕೊಡುಗೆ ಅಪಾರವಾಗಿದ್ದು , ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನದ ಮೂಲಕ ತುಳಿತಕ್ಕೊಳಗಾದ ಜನತೆಗೆ ನ್ಯಾಯ ದೊರಕಿಸಿಕೊಟ್ಟು ಸಮ ಸಮಾಜ ಕಟ್ಟುವಿಕೆಯ ಸ್ಥಿರ ಬುನಾದಿ ಹಾಕಿಕೊಟರೆ
ಜಗಜೀವನ್ ರಾಮ್ ಅವರು ರಾಜಕೀಯ ಕ್ಷೇತ್ರದಲ್ಲಿ ಐದು ದಶಕಗಳ ಕಾಲ ಸೇವೆ ಸಲ್ಲಿಸಿ, ದೇಶದ ಸಾಮಾಜಿಕ ಬದಲಾವಣೆಗೆ ಶ್ರಮಿಸಿದರು. ಮಾನವೀಯ ಮೌಲ್ಯಗಳನ್ನಾಧರಿಸಿದ ಅವರ ಜೀವನ ಯುವಜನತೆಗೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಮಾತನಾಡಿ
ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಭಾರತದ ಇತಿಹಾಸದಲ್ಲಿ ಶೋಷಿತ ಸಮುದಾಯಗಳ ಧ್ವನಿಯಾಗಿ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಇಬ್ಬರು ಮಹಾನ್ ನಾಯಕರು, ಇವರಿಬ್ಬರ ಬದುಕು, ಸಾಧನೆ ಮತ್ತು ವಿಚಾರಧಾರೆಗಳು ಭಾರತೀಯ ಸಮಾಜದ ಮೇಲೆ ಆಳವಾದ ಪ್ರಭಾವ ಬೀರಿವೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ನಂತರಾಮು ತಮ್ಮ ಭಾಷಣದಲ್ಲಿ, ಜಗಜೀವನ್ ರಾಮ್ ಅವರು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾನ್ ನಾಯಕರು ಎಂದು ಹೇಳಿದರು. ಅವರ ಜೀವನ ಸಾಧನೆಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣಾಧಿಕಾರಿ ಯಮುನಾ ಮಾತನಾಡಿ, ಮಹನೀಯರ ಆದರ್ಶಗಳು ಸಮಾಜದಲ್ಲಿ ಸಮಾನತೆ ಮತ್ತು ಶಾಂತಿ ಸ್ಥಾಪಿಸಲು ಸಹಾಯಕವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಉಮೇಶ್ ಪಿ ಆರ್ ಡಿ ಎಇಇ ದಯಾನಂದ್ ,ಪಿಡಬ್ಲ್ಯೂಡಿ ಎಇಇ ದೀಪಕ್ ಯಾದವ್, ಪಶು ವೈದ್ಯಧಿಕಾರಿ ಸುಧಾಕರ್, ತೋಟಗಾರಿಕಾ ಅಧಿಕಾರಿ ರಾಮಾಂಜಿನಪ್ಪ , ಸಿ ಡಿ ಪಿ ಓ ಗಂಗಾಧರ್ , ಬಿಇಒ ಫಿರಾಜ್ ಬೇಗಮ್, ಕೆಇಬಿ ಪ್ರಸನ್ನ ಕುಮಾರ್
ಮುಖಂಡರುಗಳಾದ ಚಿಕ್ಕಪ್ಪಯ್ಯ ಶಿಕ್ಷಕ ಲಕ್ಷ್ಮಿಪುತ್ರ , ರಾಮಾಂಜನೇಯ್ಯ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
– ಶ್ರೀನಿವಾಸ್ ಕೊರಟಗೆರೆ.
