ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ನ ಅಡಿಯಲ್ಲಿ ಕೋರ ಹೋಬಳಿ ಮೆಳೇಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರೂ 3 ಲಕ್ಷದ ಅನುದಾನದ ಮೊತ್ತದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತುಮಕೂರು 1 ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ರವರು ಹಸ್ತಾಂತರ ಮಾಡಿದರು.
ತಾಲೂಕಿನ ಯೋಜನಾಧಿಕಾರಿಗಳಾದ ಸಂದೇಶ್.ಪಿ.ಬಿ, ಟ್ರಸ್ಟ್ ನ ಅಧ್ಯಕ್ಷರಾದ ಎಸ್.ಭೋಜಯ್ಯ, ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಶಿವರಾಮಯ್ಯ, ವಲಯದ ಮೇಲ್ವಿಚಾರಕರಾದ ಮಮತಾ, ಊರಿನ ಗಣ್ಯರು,ಭಕ್ತರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
