
ಬೆಂಗಳೂರು: ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದಿಂದಾಗಿ ಹಂಪಿ ಪ್ರವಾಸಿತಾಣದ ಮೇಲೆ ದುಷ್ಟಪರಿಣಾಮ ಬೀರಿದೆ. ಇನ್ನು ಈ ಸಂಬಂಧ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಇಂದು ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಮ್ಸ್ಟೇಗಳಲ್ಲಿಭದ್ರತೆ ಮತ್ತು ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ. ಹೋಮ್ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಹಾಗೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದೆ.
ಮೊನ್ನೆ ಕೊಪ್ಪಳದ ಗಂಗಾವತಿಯ ಸಣಾಪುರದಲ್ಲಿ ಇಸ್ರೇಲ್ ಮಹಿಳೆ, ರೆಸಾರ್ಟ್ ಮಾಲಕಿ ಮೇಲೆ ಗ್ಯಾಂಗ್ರೇಪ್ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖಂಡಿಸಿದ್ದಾರೆ. ಇದೀಗ ಸಿಎಂ ಸೂಚನೆ ಮೇರೆಗೆ ಗೃಹ ಇಲಾಖೆಯು ರೆಸಾರ್ಟ್, ಹೋಮ್ಸ್ಟೇಗಳಲ್ಲಿ ಭದ್ರತೆ & ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿನ ರೆಸಾರ್ಟ್, ಹೋಮ್ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಹೋಮ್ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ. ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಪ್ರವಾಸಿಗರನ್ನು ಕರೆದೊಯ್ದು ದುರ್ಘಟನೆ ಸಂಭವಿಸಿದರೆ ರೆಸಾರ್ಟ್, ಹೋಂಸ್ಟೇಗಳ ಮಾಲೀಕರೇ ಜವಾಬ್ದಾರರು ಎಂದು ಖಡಕ್ ಆಗಿ ತಿಳಿಸಲಾಗಿದೆ.
ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ತೊಂದರೆಯಾದರೆ ರೆಸಾರ್ಟ್, ಹೋಮ್ಸ್ಟೇ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಲಿದ್ದು, ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆಂದು ಸುತ್ತೋಲೆ ರೆಸಾರ್ಟ್ ಮತ್ತು ಹೋಮ್ಸ್ಟೇಗಳಿಗೆ ರಾಜ್ಯ ಗೃಹ ಇಲಾಖೆ ಸುತ್ತೋಲೆ ಮೂಲಕ ಎಚ್ಚರಿಕೆ ನೀಡಿದೆ.