ಶ್ಲೋಕ – 08
ನತು ಮಾಂ ಶಕ್ಯಸೇ ದ್ರಷ್ಟುಮನೇನೈವ ಸ್ವಚಕ್ಷುಷಾ ।
ದಿವ್ಯಂ ದದಾಮಿ ತೇ ಚಕ್ಷುಃ ಪಶ್ಯ ಮೇ ಯೋಗಮೈಶ್ವರಮ್ ॥೮॥
ನತು ಮಾಮ್ ಶಕ್ಯಸೇ ದ್ರಷ್ಟುಮ್ ಅನೇನ ಏವ ಸ್ವ ಚಕ್ಷುಷಾ ।
ದಿವ್ಯಮ್ ದದಾಮಿ ತೇ ಚಕ್ಷುಃ ಪಶ್ಯ ಮೇ ಯೋಗಮ್ ಐಶ್ವರಮ್—ಆದರೆ ನಿನ್ನ ಈ ಹೊರಗಣ್ಣಿಂದಲೆ ನೋಡಲಾರೆ ನನ್ನನ್ನು. ನೀಡುತ್ತೇನೆ ನಿನಗೆ ದಿವ್ಯದ ಒಳಗಣ್ಣು. ನೋಡು ಜಗವನಾಳುವ ನನ್ನಳವನ್ನು.
ಭಗವಂತನ ರೂಪವನ್ನು ಈ ನಮ್ಮ ಹೊರಗಣ್ಣಿನಿಂದ ಕಾಣಲು ಸಾಧ್ಯವಿಲ್ಲ. ಸ್ವರೂಪಭೂತನಾದ ಆ ಭಗವಂತನನ್ನು ನಾವು ನಮ್ಮ ಸ್ವರೂಪಭೂತವಾದ ಕಣ್ಣಿನಿಂದ ಮಾತ್ರ ನೋಡಲು ಸಾಧ್ಯ. ಇಲ್ಲಿ ಕೃಷ್ಣ ಅರ್ಜುನನಿಗೆ ಆತನ ಸ್ವರೂಪಭೂತವಾದ ಕಣ್ಣಿನಿಂದ ಸರ್ವಸಮರ್ಥ ಭಗವಂತನನ್ನು ನೋಡುವ ಸೌಭಾಗ್ಯವನ್ನು ಕರುಣಿಸುತ್ತಾನೆ.
