ಬೆಂಗಳೂರು: ಅವರ ಜಯಂತಿ ಅಂಗವಾಗಿ ದಲಿತ ಸಂರಕ್ಷ ಸಮಿತಿ ಕರ್ನಾಟಕ ವತಿಯಿಂದ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಿಬಿಎಂಪಿ ಕಾರ್ಮಿಕರಿಗೆ 100 ಸೀರೆಗಳು, ಕಟ್ಟಡ ಕಾರ್ಮಿಕರಿಗೆ 50 ಸುರಕ್ಷತಾ ಕಿಟ್ಗಳು ಹಾಗೂ ವಿದ್ಯಾರ್ಥಿಗಳಿಗೆ 100 ನೋಟ್ಬುಕ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಲಯನ್ ಬಾಲಕೃಷ್ಣ, ಮುಖ್ಯ ಜನರಲ್ ಸೆಕ್ರೆಟರಿ ಕೆ. ರಾಜೇಶ್, ಹಿರಿಯ ರಾಜ್ಯ ಉಪಾಧ್ಯಕ್ಷ ಎಸ್. ರಾಜಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ವಕ್ತಾರರು, ಅವರು ಕೇವಲ ಸಮಾಜ ಸುಧಾರಕರಷ್ಟೇ ಅಲ್ಲದೆ, ಭಾರತದ ಮಹಾನ್ ರಾಜಕೀಯ ಚಿಂತಕರಲ್ಲಿ ಒಬ್ಬರಾಗಿದ್ದಾರೆ ಎಂದು ಹೇಳಿದರು. ನಿಜವಾದ ಪ್ರಜಾಪ್ರಭುತ್ವ ಎಂದರೆ ಕೇವಲ ಮತದಾನವಲ್ಲ, ಅದು ಸಮಾನತೆ, ನ್ಯಾಯ ಮತ್ತು ಪ್ರತಿಯೊಬ್ಬ ನಾಗರಿಕನ ಗೌರವವನ್ನು ಒಳಗೊಂಡಿರಬೇಕು ಎಂಬುದು ಅವರ ನಂಬಿಕೆಯಾಗಿತ್ತು ಎಂದು ಅಭಿಪ್ರಾಯಪಟ್ಟರು.

ಭಾರತ ಸಂವಿಧಾನದ ಶಿಲ್ಪಿಯಾಗಿದ್ದ ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ಒದಗಿಸುವ ದೇಶವಾಗಿ ಭಾರತವನ್ನು ರೂಪಿಸಿದ್ದು, ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ರಾಜಕೀಯ ಪ್ರತಿನಿಧಿತ್ವವನ್ನು ಖಚಿತಪಡಿಸಲು ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥವಿಲ್ಲ ಎಂಬ ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ನ್ಯಾಯ, ಜವಾಬ್ದಾರಿ ಮತ್ತು ಸಮಾನತೆಯ ಆಧಾರದ ಮೇಲೆ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದು ಹೇಳಿದರು.
