ಕೊರಟಗೆರೆ :– ತಾಲ್ಲೂಕಿನ ಕೋಳಾಲ ಗ್ರಾಮದ ಶ್ರೀ ಮುರುಡುಬಸವೇಶ್ವರ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಮಹೋತ್ಸವ ಹಾಗೂ ಬೆಳ್ಳಿ ರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಪ್ರತೀ ವರ್ಷದಂತೆ ಈ ಬಾರಿಯೂ ಸಹ ಅದ್ದೂರಿ ಬಸವ ಜಯಂತಿ ಕಾರ್ಯಕ್ರಮ ಹಮಿಕೊಂಡಿದ್ದು, ಬೆಳಿಗ್ಗೆ 6.30ಕ್ಕೆ ಶ್ರೀ ಮುರುಡುಬಸವೇಶ್ವರ ಸ್ವಾಮಿಗೆ ಗಂಗಾ ಪೂಜೆ, ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
9 ಗಂಟೆಗೆ ಗ್ರಾಮದಲ್ಲಿರುವ ಗೌರಿ-ಗಣೇಶ ದೇವಾಲಯದಲ್ಲಿ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವೀರಗಾಸೆ ಸೇರಿದಂತೆ ವಿವಿಧ ಜನಪದ ಕಲಾತಂಡಗಳೊಂದಿಗೆ ಆರತಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮುರುಡುಬಸವೇಶ್ವರ ಸ್ವಾಮಿಗೆ ಅಷ್ಟೋತ್ತರ, ಮಹಾಮಂಗಳಾರತಿ, ಆರತಿ ಉತ್ಸವ ನಡೆಯಿತು. ನಂತರ ವೈಭವಯುತವಾಗಿ ಅಲಂಕೃತವಾದ ಬೆಳ್ಳಿರಥದಲ್ಲಿ ಶ್ರೀ ಮುರುಡುಬಸವೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಪ್ರತಿ ವರ್ಷ ಸಮಸ್ತ ಗ್ರಾಮಸ್ಥರು, ಅಕ್ಕಪಕ್ಕದ ಗ್ರಾಮದ ಭಕ್ತರ ಸಹಕಾರದೊಂದಿಗೆ ಬಸವಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಸಹ ಅದ್ದೂರಿಯಾಗಿ ಬಸವನ ಜಯಂತಿ ಕಾರ್ಯಕ್ರಮ ನಡೆದಿದ್ದು, ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
– ಶ್ರೀನಿವಾಸ್ ಕೊರಟಗೆರೆ.
