ಕೊರಟಗೆರೆ:- ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಧುಗಿರಿ ಶೈಕ್ಷಣಿಕ ಜಿಲ್ಲೆ ಕೊರಟಗೆರೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಮೇಲ್ಗೈ ಸಾಧಿಸಿದ್ದು, ಈ ಬಾರಿಯ ಫಲಿತಾಂಶ ಚೇತರಿಕೆ ಕಂಡು ಬಂದಿದ್ದು ಶೇಕಡ 64.79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ ಕೊರಟಗೆರೆ ತಾಲೂಕಿನಲ್ಲಿ ಈ ಬಾರಿ ಉತ್ತಮ ಫಲಿತಾಂಶ ಕಂಡುಬಂದಿದೆ, ಕಳೆದ ವರ್ಷಗಳಿಗಿಂತ ಫಲಿತಾಂಶದಲ್ಲಿ ಚೇತರಿಕೆ ಕಂಡುಬಂದಿದ್ದು, ಶೇ. 64.79ರಷ್ಟು ಉತ್ತೀರ್ಣರಾಗಿದ್ದಾರೆ.

ತಾಲೂಕಿನ ಹಲವು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಕೆಲವು ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಚಾಣಕ್ಯ ಪಬ್ಲಿಕ್ ಶಾಲೆಯ ಹರ್ಷ 618 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದು, ರವೀಂದ್ರ ಬಾರತಿ ವಿದ್ಯಾ ಸಂಸ್ಥೆಯ ಹೇಮಂತ್ 609 ಅಂಕಗಳಿಸಿದ್ದಾರೆ , ಇತರ ವಿದ್ಯಾರ್ಥಿಗಳೂ ಉತ್ತಮ ಸಾಧನೆ ಮೆರೆದಿದ್ದಾರೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರಟಗೆರೆ ತಾಲೂಕು ಮೊದಲ ಸ್ಥಾನದಲ್ಲಿದ್ದು, ವಿದ್ಯಾರ್ಥಿಗಳ ಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನ ಇದಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ.
– ಶ್ರೀನಿವಾಸ್ ಕೊರಟಗೆರೆ
