ತುಮಕೂರು: 2025-26ನೇ ಸಾಲಿನ ತುಮಕೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಪಾವಗಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು ತುಮಕೂರು ನಗರದ ಶ್ರೀ ಸಿದ್ದಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಡಾ||ಟಿ.ಬಿ.ನಿಜಲಿಂಗಪ್ಪ, ಐ.ಕ್ಯೂ.ಎ.ಸಿ ಸಂಚಾಲಕರಾದ ಹೆಚ್.ಜಿ.ಸರ್ವಮಂಗಳ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹನುಮಂತರಾಯಪ್ಪ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆಶಾರಾಣಿ ಜೆ.ಬಿ, ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎಲ್, ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾದ ನಯನ.ಎಂ, ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ನಾಗಲಕ್ಷ್ಮಿ ಎಸ್, ಆಶಾರಾಣಿ.ಆರ್.ಎಸ್, ದೈಹಿಕ ಶಿಕ್ಷಣ ನಿರ್ದೇಶಕರಾದ ಉದಯ್ ಕುಮಾರ್.ಎಂ, ಕಾಲೇಜಿನ ಆಡಳಿತ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಭಿನಂದಿಸಿದರು.
– ಚಂದ್ರಚೂಡ ಕೆ.ಬಿ
